ಮುಂಬೈ: ಶಾಲೆಯಲ್ಲೇ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಇಬ್ಬರು ಕ್ಲಾಸ್ ಮೇಟ್ ಗಳಿಂದ ಅತ್ಯಾಚಾರ
ಮುಂಬೈನ ಮಾಟುಂಗಾ ಪ್ರದೇಶದಲ್ಲಿನ ಸರ್ಕಾರಿ ಶಾಲೆಯ ತರಗತಿಯೊಳಗೆ ಇಬ್ಬರು ಹುಡುಗರು ತಮ್ಮ 13 ವರ್ಷದ ಕ್ಲಾಸ್ ಮೇಟ್ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಪೊಲೀಸರು ಕೇಸ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು...
Published: 02nd December 2022 03:29 PM | Last Updated: 02nd December 2022 03:29 PM | A+A A-

ಸಾಂದರ್ಭಿಕ ಚಿತ್ರ
ಮುಂಬೈ: ಮುಂಬೈನ ಮಾಟುಂಗಾ ಪ್ರದೇಶದಲ್ಲಿನ ಸರ್ಕಾರಿ ಶಾಲೆಯ ತರಗತಿಯೊಳಗೆ ಇಬ್ಬರು ಹುಡುಗರು ತಮ್ಮ 13 ವರ್ಷದ ಕ್ಲಾಸ್ ಮೇಟ್ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಪೊಲೀಸರು ಕೇಸ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
ಕಳೆದ ಸೋಮವಾರ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನು ಓದಿ: ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದ ಶಾಲಾ ಬಸ್ ಚಾಲಕನ ಬಂಧನ
"ತರಗತಿಯಲ್ಲಿದ್ದ ಇತರ ವಿದ್ಯಾರ್ಥಿಗಳು ನೃತ್ಯ ಅಭ್ಯಾಸಕ್ಕಾಗಿ ಹೊರಬಂದಾಗ ಆಕೆಯ ಇಬ್ಬರು ಕ್ಲಾಸ್ ಮೇಟ್ಸ್ ಗಳು 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಇಬ್ಬರು ಆರೋಪಿಗಳು ಪರಿಸ್ಥಿತಿಯ ಲಾಭ ಪಡೆದು ಈ ಕೃತ್ಯ ಎಸಗಿದ್ದಾರೆ" ಎಂದು ಮಾಟುಂಗಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
"ಈ ಘಟನೆಯು ಹುಡುಗಿಯನ್ನು ಬೆಚ್ಚಿಬೀಳಿಸಿದೆ ಮತ್ತು ಅವಳು ತನ್ನ ಕುಟುಂಬ ಸದಸ್ಯರೊಂದಿಗೆ ತನ್ನ ಸಂಕಟವನ್ನು ಹೇಳಿಕೊಂಡಿದ್ದಾಳೆ. ಪೋಷಕರು ತಕ್ಷಣ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ" ಎಂದು ಅಧಿಕಾರಿ ಹೇಳಿದ್ದಾರೆ.
ದೂರಿನ ಆಧಾರದ ಮೇಲೆ ಪೊಲೀಸರು ವಿದ್ಯಾರ್ಥಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ(IPC) ಸೆಕ್ಷನ್ 376ಡಿಎ (ಹದಿನಾರು ವರ್ಷದೊಳಗಿನ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(POCSO) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.