ರಕ್ಷಣಾ ಕಾರ್ಯಾಚರಣೆ
ರಕ್ಷಣಾ ಕಾರ್ಯಾಚರಣೆ

ಛತ್ತೀಸ್‌ಗಢ: ಗಣಿಯಲ್ಲಿ ಮಣ್ಣು ಕುಸಿದು 7 ಮಂದಿ ಸಾವು

ಛತ್ತೀಸ್‌ಗಢದ ಬಸ್ತಾರ್ ಜಿಲ್ಲೆಯ ಮಲ್ಗಾಂವ್ ಪ್ರದೇಶದಲ್ಲಿ ಶುಕ್ರವಾರ ಸುಣ್ಣದ ಕಲ್ಲಿನ ಗಣಿಯಲ್ಲಿ ಮಣ್ಣು ಕುಸಿದು ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಸ್ತಾರ್: ಛತ್ತೀಸ್‌ಗಢದ ಬಸ್ತಾರ್ ಜಿಲ್ಲೆಯ ಮಲ್ಗಾಂವ್ ಪ್ರದೇಶದಲ್ಲಿ ಶುಕ್ರವಾರ ಸುಣ್ಣದ ಕಲ್ಲಿನ ಗಣಿಯಲ್ಲಿ ಮಣ್ಣು ಕುಸಿದು ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರಲ್ಲಿ ಆರು ಮಹಿಳೆಯರು ಸೇರಿದ್ದಾರೆ ಎಂದು ಅವರು ಹೇಳಿದ್ದಾರೆ.

ಜಿಲ್ಲೆಯ ಪ್ರಧಾನ ಕಛೇರಿ ಜಗದಲ್‌ಪುರದಿಂದ ಸುಮಾರು 12 ಕಿಮೀ ದೂರದಲ್ಲಿರುವ ನಗರನಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಮಾಲ್ಗಾಂವ್ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗಣಿಯಲ್ಲಿ ಮಣ್ಣನ್ನು ಅಗೆಯುತ್ತಿದ್ದಾಗ ಅದರ ಒಂದು ಭಾಗ ಕುಸಿದು ಬಿದ್ದಿದೆ, ಇದರಿಂದಾಗಿ ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡರು ಎಂದು ಅವರು ಹೇಳಿದ್ದಾರೆ.ಗ

ಈ ಬಗ್ಗೆ ಮಾಹಿತಿ ತಿಳಿದ ಕೂಡಲೇ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು.

ಐವರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಏಳು ಜನರು ಮಾತ್ರ ಮಣ್ಣು ಅಗೆಯುತ್ತಿದ್ದರು ಹಾಗಾಗಿ 7 ಜನರ ಮೇಲೆ ಸುಣ್ಣದ ಕಲ್ಲು ಕುಸಿದು ಬಿದ್ದಿದೆ. ಆದರೆ ರಕ್ಷಣಾ ಕಾರ್ಯ ಇನ್ನೂ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com