ವಿಕಲಚೇತನರಿಗೆ ಅವಕಾಶ ಕಲ್ಪಿಸಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ: ಪ್ರಧಾನಿ ನರೇಂದ್ರ ಮೋದಿ
ವಿಶ್ವ ಅಂಗವಿಕಲರ ದಿನವಾದ ಶನಿವಾರದಂದು ಪ್ರಧಾನಿ ನರೇಂದ್ರ ಮೋದಿ ಅವರು, ತಮ್ಮ ಸರ್ಕಾರವು ವಿಕಲಚೇತನರಿಗೆ ಅವಕಾಶಗಳನ್ನು ಸೃಷ್ಟಿಸಲು ಅನೇಕ ಕ್ರಮಗಳನ್ನು ಕೈಗೊಂಡಿದೆ ಮತ್ತು ಈ ಮೂಲಕ ಅವರು ಬೆಳಗಲು ಅನುವು ಮಾಡಿಕೊಡುತ್ತಿದೆ ಎಂದು ಹೇಳಿದರು.
Published: 03rd December 2022 11:07 AM | Last Updated: 03rd December 2022 11:10 AM | A+A A-

ಪ್ರಧಾನಿ ನರೇಂದ್ರ ಮೋದಿ
ನವದೆಹಲಿ: ವಿಶ್ವ ಅಂಗವಿಕಲರ ದಿನವಾದ ಶನಿವಾರದಂದು ಪ್ರಧಾನಿ ನರೇಂದ್ರ ಮೋದಿ ಅವರು, ತಮ್ಮ ಸರ್ಕಾರವು ವಿಕಲಚೇತನರಿಗೆ ಅವಕಾಶಗಳನ್ನು ಸೃಷ್ಟಿಸಲು ಅನೇಕ ಕ್ರಮಗಳನ್ನು ಕೈಗೊಂಡಿದೆ ಮತ್ತು ಈ ಮೂಲಕ ಅವರು ಬೆಳಗಲು ಅನುವು ಮಾಡಿಕೊಡುತ್ತಿದೆ ಎಂದು ಹೇಳಿದರು.
ಅಲ್ಲದೆ, ಇದೇ ವೇಳೆ ದಿವ್ಯಾಂಗ ಜನರ ಧೈರ್ಯ ಮತ್ತು ಸಾಧನೆಗಳನ್ನು ಶ್ಲಾಘಿಸಿದರು.
'ನಮ್ಮ ಸರ್ಕಾರವು ಪ್ರವೇಶ ಸಾಧ್ಯತೆಯ ಮೇಲೆ ಎಲ್ಲರಿಗೂ ಸಮಾನವಾಗಿ ಗಮನಹರಿಸಿದೆ. ಇದು ಪ್ರಮುಖ ಕಾರ್ಯಕ್ರಮಗಳು ಮತ್ತು ಮುಂದಿನ ಪೀಳಿಗೆಯ ಮೂಲಸೌಕರ್ಯಗಳ ರಚನೆಯಲ್ಲಿ ಪ್ರತಿಫಲಿಸುತ್ತದೆ. ಅಂಗವಿಕಲರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರಲು ತಳಮಟ್ಟದಲ್ಲಿ ಕೆಲಸ ಮಾಡುವ ಎಲ್ಲರನ್ನೂ ಕೃತಜ್ಞತೆಯಿಂದ ಸ್ಮರಿಸಲು ನಾನು ಬಯಸುತ್ತೇನೆ' ಎಂದು ಟ್ವೀಟ್ ಮಾಡಿದ್ದಾರೆ.
ಅಂಗವಿಕಲರ ಹಕ್ಕುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ಅವರು ಎದುರಿಸುತ್ತಿರುವ ಸವಾಲುಗಳನ್ನು ಎದುರಿಸಲು ರಾಜಕೀಯ ಇಚ್ಛಾಶಕ್ತಿ ಮತ್ತು ಸಂಪನ್ಮೂಲಗಳನ್ನು ಸಜ್ಜುಗೊಳಿಸಲು ಪ್ರತಿವರ್ಷ ಡಿಸೆಂಬರ್ 3 ರಂದು ಈ ದಿನವನ್ನು ವಿಶ್ವದಾದ್ಯಂತ ಆಚರಿಸಲಾಗುತ್ತದೆ.