ಸಾಂಸ್ಥಿಕ ಜವಾಬ್ದಾರಿಯನ್ನು ಉತ್ತಮವಾಗಿ ನಿಭಾಯಿಸಿ ಇಲ್ಲವೇ ಸಹೋದ್ಯೋಗಿಗಳಿಗೆ ದಾರಿ ಮಾಡಿಕೊಡಿ: ಮಲ್ಲಿಕಾರ್ಜುನ ಖರ್ಗೆ

ಮೇಲ್ಮಟ್ಟದಿಂದ ಕೆಳಮಟ್ಟದವರೆಗೂ ಪಕ್ಷದ ಸಾಂಸ್ಥಿಕ ಹೊಣೆಗಾರಿಕೆಯನ್ನು ಉತ್ತಮವಾಗಿ ನಿಭಾಯಿಸಬೇಕು ಮತ್ತು ತಮ್ಮ ಜವಾಬ್ದಾರಿಗಳನ್ನು ಪೂರೈಸಲು ಸಾಧ್ಯವಾಗದವರು ತಮ್ಮ ಸಹೋದ್ಯೋಗಿಗಳಿಗೆ ದಾರಿ ಮಾಡಿಕೊಡಬೇಕಾಗುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
ಮಲ್ಲಿಕಾರ್ಜುನ್ ಖರ್ಗೆ
ಮಲ್ಲಿಕಾರ್ಜುನ್ ಖರ್ಗೆ

ನವದೆಹಲಿ: ಮೇಲ್ಮಟ್ಟದಿಂದ ಕೆಳಮಟ್ಟದವರೆಗೂ ಪಕ್ಷದ ಸಾಂಸ್ಥಿಕ ಹೊಣೆಗಾರಿಕೆಯನ್ನು ಉತ್ತಮವಾಗಿ ನಿಭಾಯಿಸಬೇಕು ಮತ್ತು ತಮ್ಮ ಜವಾಬ್ದಾರಿಗಳನ್ನು ಪೂರೈಸಲು ಸಾಧ್ಯವಾಗದವರು ತಮ್ಮ ಸಹೋದ್ಯೋಗಿಗಳಿಗೆ ದಾರಿ ಮಾಡಿಕೊಡಬೇಕಾಗುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಖರ್ಗೆ ಅವರು ರಚಿಸಿದ ಕಾಂಗ್ರೆಸ್ ಸ್ಟೀರಿಂಗ್ ಕಮಿಟಿಯ ಮೊದಲ ಸಭೆಯಲ್ಲಿ ತಮ್ಮ ಆರಂಭಿಕ ಭಾಷಣದಲ್ಲಿ, ಮುಂದಿನ 30 ರಿಂದ 90 ದಿನಗಳಲ್ಲಿ ಜನರ ಸಮಸ್ಯೆಗಳ ಕುರಿತು ಚಳವಳಿಯ ಮಾರ್ಗಸೂಚಿಯನ್ನು ಸಲ್ಲಿಸುವಂತೆ ರಾಜ್ಯ ಉಸ್ತುವಾರಿಗಳಿಗೆ ಹೇಳಿದರು.

'ಪಕ್ಷ ಮತ್ತು ದೇಶದ ಕಡೆಗಿನ ನಮ್ಮ ಜವಾಬ್ದಾರಿಯ ದೊಡ್ಡ ಭಾಗವೆಂದರೆ ಉನ್ನತ ಮಟ್ಟದಿಂದ ಕೆಳಮಟ್ಟದವರೆಗೂ ಸಾಂಸ್ಥಿಕ ಹೊಣೆಗಾರಿಕೆ ಎಂದು ನಾನು ನಂಬುತ್ತೇನೆ. ಕಾಂಗ್ರೆಸ್ ಸಂಘಟನೆ ಬಲಿಷ್ಠವಾಗಿದ್ದರೆ, ಜವಾಬ್ದಾರಿಯುತವಾಗಿ, ಜನರ ನಿರೀಕ್ಷೆಗೆ ತಕ್ಕಂತೆ ನಡೆದುಕೊಂಡರೆ ಮಾತ್ರ ನಾವು ಚುನಾವಣೆಯಲ್ಲಿ ಗೆದ್ದು ದೇಶದ ಜನರ ಸೇವೆ ಮಾಡಲು ಸಾಧ್ಯವಾಗುತ್ತದೆ' ಎಂದು ಕಾಂಗ್ರೆಸ್ ಮುಖ್ಯಸ್ಥರು ಹೇಳಿದರು.

ಪದಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸಂದೇಶ ನೀಡಿರುವ ಖರ್ಗೆ, ಪಕ್ಷದಲ್ಲಿ ಅತ್ಯಂತ ಜವಾಬ್ದಾರಿಯುತ ವ್ಯಕ್ತಿಗಳು ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದರೆ, ಕೆಲವರು ಕಡಿಮೆ ಜವಾಬ್ದಾರಿ ಎಂದು ನಿರ್ಲಕ್ಷ್ಯಿಸುತ್ತಿದ್ದಾರೆ. ಇದು ಸರಿಯೂ ಅಲ್ಲ, ಸ್ವೀಕಾರಾರ್ಹವೂ ಅಲ್ಲ. ತಮ್ಮ ಜವಾಬ್ದಾರಿಯನ್ನು ನಿಭಾಯಿಸಲು ಸಾಧ್ಯವಾಗದವರು, ಅವರು ತಮ್ಮ ಸಹೋದ್ಯೋಗಿಗಳಿಗೆ ದಾರಿ ಮಾಡಿಕೊಡಬೇಕು ಎಂದರು.

ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆಯು ಇತಿಹಾಸ ಬರೆಯುತ್ತಿದೆ ಎಂದು ಶ್ಲಾಘಿಸಿದ ಅವರು, ಯಾತ್ರೆಯು ಇದೀಗ ಆಂದೋಲನದ ರೂಪವನ್ನು ಪಡೆದುಕೊಂಡಿದೆ ಎಂದು ಹೇಳಿದರು.

ದ್ವೇಷದ ಬೀಜಗಳನ್ನು ಬಿತ್ತುವ ಮತ್ತು ವಿಭಜನೆಯ ಫಲವನ್ನು ಕೊಯ್ಯುವ ಆಳುವ ಶಕ್ತಿಗಳ ವಿರುದ್ಧ ಹೋರಾಡುವುದು ಕಾಂಗ್ರೆಸ್ ಪಕ್ಷದ ಕರ್ತವ್ಯ ಎಂದು ಖರ್ಗೆ ಹೇಳಿದರು.

ಪಕ್ಷದ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲಾ, ಹಿರಿಯ ನಾಯಕರಾದ ಪಿ ಚಿದಂಬರಂ, ಆನಂದ್ ಶರ್ಮಾ, ಮೀರಾ ಕುಮಾರ್ ಮತ್ತು ಅಂಬಿಕಾ ಸೋನಿ ಸಭೆಯಲ್ಲಿ ಭಾಗವಹಿಸಿದ್ದರು.

ಅಕ್ಟೋಬರ್‌ನಲ್ಲಿ ಖರ್ಗೆ ಅಧಿಕಾರ ವಹಿಸಿಕೊಂಡ ನಂತರ ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಬದಲಿಗೆ ಸ್ಟೀರಿಂಗ್ ಸಮಿತಿಯನ್ನು ರಚಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com