
ರಾಹುಲ್ ಗಾಂಧಿ ಜೊತೆಗೆ ನೃತ್ಯ ಮಾಡುತ್ತಿರುವ ಕಾಂಗ್ರೆಸ್ ಮುಖಂಡರು
ಜಲವಾರ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ 'ಭಾರತ್ ಜೋಡೋ ಯಾತ್ರೆ'' ಭಾನುವಾರ ಸಂಜೆ ರಾಜಸ್ಥಾನ ಪ್ರವೇಶಿಸಿದೆ.
ಮಧ್ಯಪ್ರದೇಶದಿಂದ ರಾಜಸ್ಥಾನದ ಜಲವಾರ್ ನಿದ ಅಂದಾಜು 40 ಕಿಲೋ ಮೀಟರ್ ದೂರದಲ್ಲಿರುವ ಚಾನ್ವಿಲಿ ಚೌರಾಹಾಗೆ ಆಗಮಿಸಿದ ರಾಹುಲ್ ಗಾಂಧಿ ಮತ್ತು ಯಾತ್ರೆಯಲ್ಲಿ ಪಾಲ್ಗೊಂಡವರಿಗೆ ಸಾಂಪ್ರದಾಯಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿ ಸ್ವಾಗತ ಕೋರಲಾಯಿತು.
ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ರಾಜಸ್ಥಾನದ ಬುಡಕಟ್ಟು ಸಮುದಾಯದವರೊಂದಿಗೆ ನೃತ್ಯ ಮಾಡಿ, ಸಂಭ್ರಮಿಸಿದ್ದಾರೆ. ರಾಹುಲ್ ಜೊತೆಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್, ಮಧ್ಯ ಪ್ರದೇಶದ ಕಾಂಗ್ರೆಸ್ ಮುಖಂಡ ಕಮಲ್ ನಾಥ್ ಮತ್ತಿತರರು ಬುಡಕಟ್ಟು ನೃತ್ಯ ಮಾಡಿದ್ದು, ಈ ವಿಡಿಯೋ ಇದೀಗ ವೈರಲ್ ಆಗಿದೆ.
#WATCH | Congress MP Rahul Gandhi, Rajasthan CM Ashok Gehlot & party leaders Sachin Pilot and Kamal Nath take part in a tribal dance in Jhalawar, Rajasthan. pic.twitter.com/18NgWYrWrk
— ANI (@ANI) December 4, 2022
ರಾಜಸ್ಥಾನದಲ್ಲಿ 17 ದಿನಗಳ ಕಾಲ ನಡೆಯಲಿರುವ ಯಾತ್ರೆಯಲ್ಲಿ 500 ಕಿ.ಮೀ ದೂರ ಕ್ರಮಿಸಲು ಯೋಜಿಸಲಾಗಿದೆ.