ಉತ್ತರ ಪ್ರದೇಶ: 17 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ಟ್ಯೂಷನ್ ಶಿಕ್ಷಕ!
ಉತ್ತರ ಪ್ರದೇಶದಲ್ಲಿ ಮಹಿಳೆಯರು ಮತ್ತು ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ಸೋಮವಾರ ಮತ್ತೊಂದು ಅತ್ಯಾಚಾರ ಪ್ರಕರಣ ವರದಿಯಾಗಿದ್ದು, ಯೋಗಿ ಆದಿತ್ಯನಾಥ್ ಆಡಳಿತದಲ್ಲಿ ಮಹಿಳೆಯರಿಗೆ...
Published: 05th December 2022 03:44 PM | Last Updated: 05th December 2022 03:44 PM | A+A A-

ಸಾಂದರ್ಭಿಕ ಚಿತ್ರ
ಬಲ್ಲಿಯಾ: ಉತ್ತರ ಪ್ರದೇಶದಲ್ಲಿ ಮಹಿಳೆಯರು ಮತ್ತು ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ಸೋಮವಾರ ಮತ್ತೊಂದು ಅತ್ಯಾಚಾರ ಪ್ರಕರಣ ವರದಿಯಾಗಿದ್ದು, ಯೋಗಿ ಆದಿತ್ಯನಾಥ್ ಆಡಳಿತದಲ್ಲಿ ಮಹಿಳೆಯರಿಗೆ ಸುರಕ್ಷಿತವಲ್ಲ ಎಂದು ಹೇಳಲಾಗುತ್ತಿದೆ.
ಬಲ್ಲಿಯಾದ ಬೈರಿಯಾ ಪ್ರದೇಶದಲ್ಲಿ 17 ವರ್ಷದ ಬಾಲಕಿಯನ್ನು ಆಕೆಯ ಟ್ಯೂಷನ್ ಟೀಚರ್ ಅಪಹರಿಸಿ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನು ಓದಿ: ಉತ್ತರ ಪ್ರದೇಶ: ಅತ್ತೆ-ಮಾವ ಕೊಟ್ಟ 11 ಲಕ್ಷ ರೂ ವರದಕ್ಷಿಣೆ ವಾಪಸ್ ನೀಡಿ ಎಲ್ಲರ ಮನಗೆದ್ದ 'ಮಾದರಿ ಅಳಿಯ'!
ಆರೋಪಿ ಶಿಕ್ಷಕ ನಿತೇಶ್ ಕುಮಾರ್ ನನ್ನು ಭಾನುವಾರ ಬಂಧಿಸಲಾಗಿದೆ ಎಂದು ಹಿರಿಯ ಸಬ್ ಇನ್ಸ್ ಪೆಕ್ಟರ್(ಬೈರಿಯಾ) ಅತುಲ್ ಮಿಶ್ರಾ ತಿಳಿಸಿದ್ದಾರೆ.
ನವೆಂಬರ್ 7 ರಂದು ನಿತೇಶ್ ಕುಮಾರ್ ಹದಿಹರೆಯದ ಬಾಲಕಿಯನ್ನು ಅಪಹರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಅವರು ಹೇಳಿದ್ದಾರೆ.
ಬಾಲಕಿ ತಾಯಿ ನೀಡಿದ ದೂರಿನ ಮೇರೆಗೆ ಭಾರತೀಯ ದಂಡ ಸಂಹಿತೆ ಮತ್ತು ಪೋಕ್ಸೋ ಕಾಯ್ದೆಯ ಅತ್ಯಾಚಾರ ಮತ್ತು ಅಪಹರಣದ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಕುರಿತು ವಿಸ್ತೃತ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.