ಉತ್ತರಪ್ರದೇಶ: ಎಂಬಿಬಿಎಸ್ ದಲಿತ ವಿದ್ಯಾರ್ಥಿ ಆತ್ಮಹತ್ಯೆ; ಕಿರುಕುಳ ಎಂದು ಆರೋಪಿಸಿದ ಪೋಷಕರು!

ಉತ್ತರ ಪ್ರದೇಶದ ಫಿರೋಜಾಬಾದ್ ವೈದ್ಯಕೀಯ ಕಾಲೇಜಿನಲ್ಲಿ 21 ವರ್ಷದ ಎಂಬಿಬಿಎಸ್ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಶನಿವಾರ ವಿದ್ಯಾರ್ಥಿನಿ ತನ್ನ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಫಿರೋಜಾಬಾದ್: ಉತ್ತರ ಪ್ರದೇಶದ ಫಿರೋಜಾಬಾದ್ ವೈದ್ಯಕೀಯ ಕಾಲೇಜಿನಲ್ಲಿ 21 ವರ್ಷದ ಎಂಬಿಬಿಎಸ್ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಶನಿವಾರ ವಿದ್ಯಾರ್ಥಿನಿ ತನ್ನ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. 

ದಲಿತ ಎಂಬ ಕಾರಣಕ್ಕೆ ಕಾಲೇಜು ಆಡಳಿತ ಮಂಡಳಿ ಶೋಷಣೆ ಮಾಡುತ್ತಿದೆ ಎಂದು ಮೃತ ಶೈಲೇಂದ್ರ ಕುಮಾರ್ ಕುಟುಂಬ ಆರೋಪಿಸಿದ್ದಾರೆ. ಇತ್ತೀಚೆಗೆ ಪ್ರಾರಂಭವಾದ ಕಾಲೇಜು ರಾಜ್ಯ ಸರ್ಕಾರದ ಸ್ವಾಯತ್ತ ಸಂಸ್ಥೆಯಾಗಿದೆ.

ಶನಿವಾರ ನಡೆದ ಪರೀಕ್ಷೆಗೆ ಶೈಲೇಂದ್ರ ಕುಮಾರ್ ಹಾಜರಾಗಿರಲಿಲ್ಲ. ಹೀಗಾಗಿ ಆತ ಪರೀಕ್ಷೆಗೆ ಏಕೆ ಹಾಜರಾಗಲಿಲ್ಲ ಎಂದು ಪರಿಶೀಲಿಸಲು ಆತನ ಸ್ನೇಹಿತರು  ಹಾಸ್ಟೆಲ್ ಕೋಣೆಗೆ ಹೋಗಿದ್ದರು. ಒಳಗಿನಿಂದ ಚಿಲುಕ ಹಾಕಿರುವುದು ಕಂಡುಬಂದಿತು. ಅವರು ಬಾಗಿಲು ಒಡೆದು ನೋಡಿದಾಗ ನೇಣು ಬಿಗಿದುಕೊಂಡಿರುವುದು ಕಂಡು ಬಂದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಲಿಲ್ಲ.

ಸಂತ್ರಸ್ತೆಗೆ ನ್ಯಾಯಕ್ಕಾಗಿ ಒತ್ತಾಯಿಸಿ ಕಾಲೇಜಿನ ವಿದ್ಯಾರ್ಥಿಗಳು ಫಿರೋಜಾಬಾದ್‌ನ ಜಿಲ್ಲಾ ಆಸ್ಪತ್ರೆ ಬಳಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದರು. ಕಾಲೇಜಿನ ಪ್ರಾಂಶುಪಾಲರು, ಹಾಸ್ಟೆಲ್ ವಾರ್ಡನ್ ಸೇರಿದಂತೆ ಇತರರು ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಿದರು.

ದಲಿತನಾಗಿದ್ದರಿಂದ ಕಾಲೇಜು ಆಡಳಿತ ಮಂಡಳಿ ಕಿರುಕುಳ ನೀಡುತ್ತಿದೆ ಎಂದು ವಿದ್ಯಾರ್ಥಿಯ ಸಂಬಂಧಿಕರು ಆರೋಪಿಸಿದ್ದಾರೆ. ಕಿರುಕುಳದ ಬಗ್ಗೆ ವಿದ್ಯಾರ್ಥಿ ತನ್ನ ಪೋಷಕರಿಗೆ ಹಲವು ಬಾರಿ ತಿಳಿಸಿದ್ದನು. ಸಂತ್ರಸ್ತನ ತಂದೆ, ವರದಿಯ ಪ್ರಕಾರ, ತನ್ನ ಮಗ ಕಾಲೇಜಿನಲ್ಲಿನ ಅಕ್ರಮಗಳು ಮತ್ತು ಮೂಲ ಸೌಕರ್ಯಗಳ ಕೊರತೆಯ ಬಗ್ಗೆ ಕಾಲೇಜು ಆಡಳಿತದ ವಿರುದ್ಧ ದನಿಯೆತ್ತಿದ್ದನು. ಕಾಲೇಜು ಆಡಳಿತ ಮಂಡಳಿ ಅವರನ್ನು ಅಮಾನತು ಮಾಡುವುದಾಗಿ ಬೆದರಿಕೆ ಹಾಕಿತ್ತು. ಶನಿವಾರ ಬೆಳಗ್ಗೆ ಫಿಸಿಯಾಲಜಿ ಪರೀಕ್ಷೆ ಬರೆಯಲು ಸಹ ಅವರಿಗೆ ಅವಕಾಶ ನೀಡಲಿಲ್ಲ. ಹೀಗಾಗಿ ವಿದ್ಯಾರ್ಥಿ ಜೀವನವನ್ನು ಕೊನೆಗೊಳಿಸಿಕೊಂಡಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com