ಅಕ್ರಮ ಹಣ ವರ್ಗಾವಣೆ: ಛತ್ತೀಸಘಡ ಸಿಎಂ ಆಪ್ತ ಮತ್ತೆ 4 ದಿನ ಇಡಿ ಕಸ್ಟಡಿಗೆ!

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೆಲ್ ಕಚೇರಿಯಲ್ಲಿ ನಿಯೋಜನೆಗೊಂಡಿರುವ ಅಧಿಕಾರಿ ಸೌಮ್ಯ ಚೌರಾಸಿಯಾ ಅವರನ್ನು ಇನ್ನೂ ನಾಲ್ಕು ದಿನಗಳ ಕಾಲ ಜಾರಿ ನಿರ್ದೇಶನಾಲಯ(ಇಡಿ) ಕಸ್ಟಡಿಗೆ ನೀಡಿ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. 
ಭುಪೇಶ್ ಭಗೇಲಾ
ಭುಪೇಶ್ ಭಗೇಲಾ

ರಾಯ್‌ಪುರ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೆಲ್ ಕಚೇರಿಯಲ್ಲಿ ನಿಯೋಜನೆಗೊಂಡಿರುವ ಅಧಿಕಾರಿ ಸೌಮ್ಯ ಚೌರಾಸಿಯಾ ಅವರನ್ನು ಇನ್ನೂ ನಾಲ್ಕು ದಿನಗಳ ಕಾಲ ಜಾರಿ ನಿರ್ದೇಶನಾಲಯ(ಇಡಿ) ಕಸ್ಟಡಿಗೆ ನೀಡಿ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. 

ಇದೇ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ಸಮೀರ್ ವಿಷ್ಣೋಯ್, ಕಲ್ಲಿದ್ದಲು ವ್ಯಾಪಾರಿ ಸೂರ್ಯಕಾಂತ್ ತಿವಾರಿ ಮತ್ತು ಇತರ ಇಬ್ಬರು ಆರೋಪಿಗಳ ನ್ಯಾಯಾಂಗ ಬಂಧನವನ್ನು ನ್ಯಾಯಾಲಯವು ಇನ್ನೂ ನಾಲ್ಕು ದಿನಗಳವರೆಗೆ ವಿಸ್ತರಿಸಿದೆ.

ಚೌರಾಸಿಯಾ ಅವರ ಕಸ್ಟಡಿ ಅವಧಿ ಇಂದಿಗೆ ಮುಗಿದಿದ್ದರಿಂದ ಅವರನ್ನು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅಜಯ್ ಸಿಂಗ್ ರಜಪೂತ್ ಅವರ ಮುಂದೆ ಹಾಜರುಪಡಿಸಲಾಗಿತ್ತು. ಚೌರಾಸಿಯಾಳನ್ನು ಹತ್ತು ದಿನಗಳ ಕಸ್ಟಡಿಗೆ ನೀಡುವಂತೆ ಇಡಿ ಒತ್ತಾಯಿಸಿತ್ತು ಎಂದು ಚೌರಾಸಿಯಾ ಪರ ವಕೀಲ ಫೈಜಲ್ ರಿಜ್ವಿ ಹೇಳಿದ್ದಾರೆ.

ವಿಷ್ಣೋಯ್, ಸೂರ್ಯಕಾಂತ್ ತಿವಾರಿ, ಅವರ ಚಿಕ್ಕಪ್ಪ ಲಕ್ಷ್ಮೀಕಾಂತ್ ತಿವಾರಿ ಮತ್ತು ಮತ್ತೊಬ್ಬ ಕಲ್ಲಿದ್ದಲು ಉದ್ಯಮಿ ಸುನಿಲ್ ಅಗರವಾಲ್ ಅವರ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ನಾಲ್ಕು ದಿನಗಳವರೆಗೆ ವಿಸ್ತರಿಸಲಾಗಿದ್ದು ಅವರನ್ನು ಡಿಸೆಂಬರ್ 10ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ರಿಜ್ವಿ ತಿಳಿಸಿದ್ದಾರೆ.

ಪ್ರಭಾವಿ ಅಧಿಕಾರಿ ಎಂದು ಪರಿಗಣಿಸಲ್ಪಟ್ಟ ಚೌರಾಸಿಯಾ ಅವರನ್ನು ಡಿಸೆಂಬರ್ 2ರಂದು ವಿಚಾರಣೆಯ ನಂತರ ಮನಿ ಲಾಂಡರಿಂಗ್ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ಬಂಧಿಸಲಾಯಿತು.

ಚೌರಾಸಿಯಾ ಅವರನ್ನು ಬಂಧಿಸುವ ಕೇಂದ್ರ ತನಿಖಾ ಸಂಸ್ಥೆಯ ಕ್ರಮವನ್ನು ಮುಖ್ಯಮಂತ್ರಿ ಬಘೇಲ್ ಅವರು 'ರಾಜಕೀಯ ಪ್ರೇರಿತ' ಎಂದು ಬಣ್ಣಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com