ಹನುಮನ್ ಚಾಲೀಸಾ ಪಠಣ: ಮಥುರಾದಲ್ಲಿ ಹೆಚ್ಚಿನ ನಿಗಾ, ಪೊಲೀಸರ ನಿಯೋಜನೆ
ಶ್ರೀ ಕೃಷ್ಣ ಜನ್ಮಭೂಮಿ ಸಂಕೀರ್ಣದ ಶಾಹಿ ಈದ್ಗಾ ಮೈದಾನದಲ್ಲಿ ಹನುಮನ್ ಚಾಲೀಸಾ ಪಠಿಸುವುದಕ್ಕೆ ಅಖಿಲ ಭಾರತ ಹಿಂದೂ ಮಹಾಸಭಾ ಕರೆ ನೀಡಿರುವ ಹಿನ್ನೆಲೆಯಲ್ಲಿ ಮಥುರಾದಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
Published: 06th December 2022 11:42 AM | Last Updated: 06th December 2022 11:42 AM | A+A A-

ಮಥುರಾ ಶ್ರೀ ಕೃಷ್ಣ ಜನ್ಮಭೂಮಿ- ಈದ್ಗಾ ಮೈದಾನದ ಸಂಕೀರ್ಣ
ಮಥುರಾ: ಶ್ರೀ ಕೃಷ್ಣ ಜನ್ಮಭೂಮಿ ಸಂಕೀರ್ಣದ ಶಾಹಿ ಈದ್ಗಾ ಮೈದಾನದಲ್ಲಿ ಹನುಮನ್ ಚಾಲೀಸಾ ಪಠಿಸುವುದಕ್ಕೆ ಅಖಿಲ ಭಾರತ ಹಿಂದೂ ಮಹಾಸಭಾ ಕರೆ ನೀಡಿರುವ ಹಿನ್ನೆಲೆಯಲ್ಲಿ ಮಥುರಾದಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಮಥುರಾದ ವಿವಿಧ ಕಡೆಗಳಲ್ಲಿ ಇಂದು ಬೆಳಗ್ಗೆಯಿಂದ ಪೊಲೀಸ್ ಬ್ಯಾರಿಕೇಡ್ ಗಳನ್ನು ಹಾಕಲಾಗಿದ್ದು, ವಾಹನಗಳನ್ನು ತಪಾಸಣೆ ಮಾಡಿ ಕಳುಹಿಸಲಾಗುತ್ತಿದೆ. ಅಖಿಲ ಭಾರತ ಹಿಂದೂ ಮಹಾಸಭಾ ಕರೆ ನಡುವೆ ಹೆಚ್ಚಿನ ನಿಗಾ ಇಡುವಂತೆ ಮಥುರಾ ಜಿಲ್ಲಾಡಳಿತ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿಗೆ ನಿರ್ದೇಶನ ನೀಡಿದೆ.
ಶ್ರೀಕೃಷ್ಣ ಜನ್ಮಭೂಮಿ- ಈದ್ಗಾ ಮೈದಾನದಲ್ಲಿ ಗೋಪಾಲ ಜಲಾಭಿಷೇಕ ಮತ್ತು ಹನುಮನ್ ಚಾಲೀಸಾ ಪಠಿಸುವುದಕ್ಕೆ ಅಖಿಲ ಭಾರತ ಹಿಂದೂ ಮಹಾಸಭಾ ನಿನ್ನೆ ದಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ ಅನುಮತಿ ಕೇಳಿತ್ತು. ಬಾಬ್ರಿ ಮಸೀದಿ ಧ್ವಂಸದ 30ನೇ ವರ್ಷದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನಿರ್ಬಂಧ ಹೇರಿದ ನಂತರ ಮಹಾಸಭಾ ಅನುಮತಿ ಕೇಳಿತ್ತು.
ಜನವರಿ 28ರವರೆಗೂ ಈ ನಿರ್ಬಂಧ ಇರಲಿದೆ. ಈ ಅವಧಿಯಲ್ಲಿ ಯಾವುದೇ ರಾಜಕೀಯ, ಸಾಮಾಜಿಕ ಅಥವಾ ಧಾರ್ಮಿಕ ಸಂಘಟನೆಗಳು ಯಾವುದೇ ಕಾರ್ಯಕ್ರಮ ನಡೆಸದಂತೆ ಐದಕ್ಕಿಂತ ಹೆಚ್ಚು ಜನರು ಒಂದೆಡೆ ಸೇರದಂತೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ.