ಈಶಾನ್ಯ ಮುಂಗಾರು ಪ್ರಭಾವ: ಡಿಸೆಂಬರ್ 8ಕ್ಕೆ ಮೊದಲ ಸೈಕ್ಲೋನ್, ತಮಿಳುನಾಡಿನ 13 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ

ದಕ್ಷಿಣ ಅಂಡಮಾನ್ ಸಮುದ್ರದಲ್ಲಿ 5.8 ಕಿಲೋ ಮೀಟರ್ ಎತ್ತರದಷ್ಟು ಮೇಲ್ಮೈ ಸುಳಿಗಾಳಿ ಎದ್ದಿದ್ದು, ಇದರ ಪ್ರಭಾವದಿಂದಾಗಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಸೃಷ್ಟಿಯಾಗಲಿದೆ. ಇದರಂತೆ ಡಿಸೆಂಬರ್ 8 ರವರೆಗೆ ದಕ್ಷಿಣ ಒಳನಾಡಿನ ಜಿಲ್ಲೆಯ ಕೆಲವೆಡೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಚೆನ್ನೈ: ದಕ್ಷಿಣ ಅಂಡಮಾನ್ ಸಮುದ್ರದಲ್ಲಿ 5.8 ಕಿಲೋ ಮೀಟರ್ ಎತ್ತರದಷ್ಟು ಮೇಲ್ಮೈ ಸುಳಿಗಾಳಿ ಎದ್ದಿದ್ದು, ಇದರ ಪ್ರಭಾವದಿಂದಾಗಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಸೃಷ್ಟಿಯಾಗಲಿದೆ. ಇದರಂತೆ ಡಿಸೆಂಬರ್ 8 ರವರೆಗೆ ದಕ್ಷಿಣ ಒಳನಾಡಿನ ಜಿಲ್ಲೆಯ ಕೆಲವೆಡೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಚಂಡಮಾರುತದಿಂದಾಗಿ ತಮಿಳುನಾಡು, ಚೆನ್ನೈ, ಪುದುಚೇರಿ ಮತ್ತು ಆಂಧ್ರಪ್ರದೇಶದಲ್ಲಿ ಡಿಸೆಂಬರ್ 8 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಡಿಸೆಂಬರ್ 7 ರಿಂದ ಪುದುಚೇರಿ, ಕಾರೈಕಲ್ ಮತ್ತು ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲಿ ಮಳೆ ಪ್ರಾರಂಭವಾಗಲಿದ್ದು, ಇದು ಡಿಸೆಂಬರ್ 8 ರವರೆಗೆ ಮುಂದುವರೆಯಲಿದೆ ಎಂದು ತಿಳಿಸಿದೆ.

ಚಂಡ ಮಾರುತ ಹಿನ್ನೆಲೆಯಲ್ಲಿ ತಮಿಳುನಾಡಿನ 13 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಮೀನುಗಾರರು ಬಂಗಾಳ ಕೊಲ್ಲಿ ಮತ್ತು ಅಂಡಮಾನ್ ಸಮುದ್ರಕ್ಕೆ ಹೋಗುವುದನ್ನು ತಡೆಯಲಾಗಿದೆ.

ತಿರುವಳ್ಳೂರು, ಚೆನ್ನೈ, ಕಾಂಚೀಪುರಂ, ಚೆಂಗಲ್ಪಟ್ಟು, ವಿಲ್ಲುಪುರಂ, ಕಲ್ಲಕುರಿಚಿ, ಕಡಲೂರು, ಅರಿಯಲೂರ್, ಪೆರಂಬಲೂರು, ಮೈಲಾಡುತುರೈ, ತಂಜಾವೂರು, ತಿರುವರೂರು ಮತ್ತು ನಾಗಪಟ್ಟಣಂನಲ್ಲಿ ಗುರುವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಶುಕ್ರವಾರದಂದು, ತಿರುವಳ್ಳೂರು, ಚೆನ್ನೈ, ವಿಲ್ಲುಪುರಂ, ಕಂಚಿ, ತಿರುವಣ್ಣಾಮಲೈ, ರಾಣಿಪೇಟ್, ವೆಲ್ಲೂರು, ತಿರುಪತ್ತೂರ್, ಕೃಷ್ಣಗಿರಿ, ಧರ್ಮಪುರಿ, ಚೆಂಗಲ್ಪಟ್ಟು ಮತ್ತು ಸೇಲಂಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಡಿಸೆಂಬರ್ 6 ರ ಸಂಜೆ ವೇಳೆಗೆ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ವಾಯುಭಾರ ಕುಸಿತವಾಗಿ ಕೇಂದ್ರೀಕೃತವಾಗಲಿದೆ ಎಂದು ಹವಾಮಾನ ಇಲಾಖೆಯ ಉಪ ಮಹಾನಿರ್ದೇಶಕ ಎಸ್ ಬಾಲಚಂದ್ರನ್ ಹೇಳಿದ್ದಾರೆ.

ಇದು ಪಶ್ಚಿಮ-ವಾಯುವ್ಯದ ಕಡೆಗೆ ಚಲಿಸುವ ಸಾಧ್ಯತೆಯಿದೆ, ನಂತರ ಇದು ಚಂಡಮಾರುತವಾಗಿ ತೀವ್ರಗೊಳ್ಳುತ್ತದೆ ಗುರುವಾರ ಬೆಳಿಗ್ಗೆ ಉತ್ತರ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶ ಕರಾವಳಿಯ ಬಳಿ ನೈಋತ್ಯ ಬಂಗಾಳ ಕೊಲ್ಲಿಯನ್ನು ತಲುಪುವ ಸಾಧ್ಯತೆಯಿದೆ, ಡಿಸೆಂಬರ್ 7 ರಿಂದ ಮಳೆಯಾಗಲಿದ್ದು, ಡಿಸೆಂಬರ್ 8 ರಂದು ಮಳೆಯು ತೀವ್ರ ಸ್ವರೂಪ ಪಡೆದುಕೊಳ್ಳಲಿದೆ" ಎಂದು ತಿಳಿಸಿದ್ದಾರೆ.

ಸ್ಕೈಮೆಟ್ ಹವಾಮಾನ ಸೇವೆಗಳ ಮುಖ್ಯ ಹವಾಮಾನಶಾಸ್ತ್ರಜ್ಞ ಮಹೇಶ್ ಪಲಾವತ್ ಮಾತನಾಡಿ, ಡಿಸೆಂಬರ್ 8 ಮಧ್ಯಾಹ್ನದ ನಂತರ ಮಳೆಯ ಪ್ರಭಾವ ಕಡಿಮೆಯಾಗಲಿದೆ. ನಂತರ ಸಾಧಾರಣ ಮಳೆಯಾಗಲಿದೆ. ಈ ಮಾನ್ಸೂನ್‌ನಲ್ಲಿ ಇದು ಕೊನೆಯ ಮಹತ್ವದ ಹವಾಮಾನ ವ್ಯವಸ್ಥೆಯಾಗಿದೆ ಎಂದು ಹೇಳಿದ್ದಾರೆ.

ಡಿಸೆಂಬರ್ 7, 8 ರಂದು ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ
ಡಿಸೆಂಬರ್ 7 ರಂದು ತಮಿಳುನಾಡು-ಪಾಂಡಿಚೆರಿ ಕರಾವಳಿ ಮತ್ತು ಮನ್ನಾರ್ ಕೊಲ್ಲಿಯಲ್ಲಿ ಗಂಟೆಗೆ 40-50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಕಚೇರಿ ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಡಿಸೆಂಬರ್ 8 ಸಂಜೆ ಹಾಗೂ ಡಿಸೆಂಬರ್ 9 ರಂದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com