ಗುಜರಾತ್‌ನಲ್ಲಿ ಎಕ್ಸಿಟ್ ಪೋಲ್‌ ಭವಿಷ್ಯ ಸುಳ್ಳಾಗಬಹುದು: ಪಂಜಾಬ್ ಸಿಎಂ ಮಾನ್

ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ, ಗುಜರಾತ್‌ನಲ್ಲಿ ತಮ್ಮ ಪಕ್ಷದ ಸೋಲಿನ ಭವಿಷ್ಯ ನುಡಿದ ಚುನಾವಣೋತ್ತರ ಸಮೀಕ್ಷೆ ತಪ್ಪಾಗಲಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್...
ಭಗವಂತ್ ಮಾನ್
ಭಗವಂತ್ ಮಾನ್
Updated on

ನವದೆಹಲಿ: ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ, ಗುಜರಾತ್‌ನಲ್ಲಿ ತಮ್ಮ ಪಕ್ಷದ ಸೋಲಿನ ಭವಿಷ್ಯ ನುಡಿದ ಚುನಾವಣೋತ್ತರ ಸಮೀಕ್ಷೆ ತಪ್ಪಾಗಲಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಬುಧವಾರ ಹೇಳಿದ್ದಾರೆ.

ಗುಜರಾತಿನಲ್ಲಿ ಆಮ್ ಆದ್ಮಿ ಪಕ್ಷ ತನ್ನ ಎಲ್ಲ ಪ್ರಯತ್ನಗಳನ್ನು ಮಾಡಿದ್ದು, ಅಲ್ಲಿ ಎಕ್ಸಿಟ್ ಪೋಲ್‌ ಭವಿಷ್ಯ ಸುಳ್ಳಾಗಬಹುದು ಮತ್ತು ಮತದಾರ ಅಚ್ಚರಿಯ ಫಲಿತಾಂಶ ನೀಡಬಹುದು ಎಂದು ಮಾನ್ ತಿಳಿಸಿದ್ದಾರೆ.

ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಭರ್ಜರಿ ಗೆಲುವು ಸಾಧಿಸಿರುವ ಎಎಪಿ ಮೊದಲ ಬಾರಿಗೆ ಅಧಿಕಾರದ ಗದ್ದಗೆ ಏರಲಿದೆ.

ಆದರೆ, ಎಕ್ಸಿಟ್ ಪೋಲ್ ಪ್ರಕಾರ ಗುಜರಾತ್ ಮತ್ತು ಹಿಮಾಚಲ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಸೋಲನುಭವಿಸಲಿದ್ದು, ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಈ ರಾಜ್ಯಗಳ ಫಲಿತಾಂಶ ನಾಳೆ ಪ್ರಕಟವಾಗಲಿದೆ.

ರಾಷ್ಟ್ರ ರಾಜಧಾನಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಂಜಾಬ್ ಮುಖ್ಯಮಂತ್ರಿ, "ಟ್ರೆಂಡ್‌ಗಳು ಈಗ ಫಲಿತಾಂಶಗಳಾಗಿ ಬದಲಾಗುತ್ತಿವೆ. ಕೇಜ್ರಿವಾಲ್ ಅವರು ರಾಷ್ಟ್ರ ರಾಜಧಾನಿಯಲ್ಲಿ ಕಾಂಗ್ರೆಸ್‌ನ 15 ವರ್ಷಗಳ ಸುದೀರ್ಘ ಆಡಳಿತವನ್ನು ಕಿತ್ತುಹಾಕಿದರು ಮತ್ತು ಈಗ ಎಂಸಿಡಿಯಲ್ಲಿ ಬಿಜೆಪಿಯ 15 ವರ್ಷಗಳ ಸುದೀರ್ಘ ಆಡಳಿತವನ್ನು ಕಿತ್ತುಹಾಕಿದ್ದಾರೆ" ಎಂದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com