ಜಮ್ಮು ಮತ್ತು ಕಾಶ್ಮೀರ: ಪೊಲೀಸ್ ಠಾಣೆಯ ಹೊರಗೆ ಗ್ರೆನೇಡ್ ದಾಳಿ, ಕಣಿವೆಯಾದ್ಯಂತ ಹೈ ಅಲರ್ಟ್ ಘೋಷಣೆ
ಜಮ್ಮು ಜಿಲ್ಲೆಯ ಪೊಲೀಸ್ ಠಾಣೆಯೊಂದರ ಹೊರಗೆ ದುಷ್ಕರ್ಮಿಗಳು ಗ್ರೆನೇಡ್ ದಾಳಿ ನಡೆಸಿದ್ದು, ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.
Published: 07th December 2022 11:07 AM | Last Updated: 07th December 2022 11:07 AM | A+A A-

ಸಾಂದರ್ಭಿಕ ಚಿತ್ರ
ಜಮ್ಮು: ಜಿಲ್ಲೆಯ ಪೊಲೀಸ್ ಠಾಣೆಯೊಂದರ ಹೊರಗೆ ದುಷ್ಕರ್ಮಿಗಳು ಗ್ರೆನೇಡ್ ದಾಳಿ ನಡೆಸಿದ್ದು, ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.
ಜಮ್ಮು ಜಿಲ್ಲೆಯ ಸಿದ್ರಾ ಪ್ರದೇಶದ ಪೊಲೀಸ್ ಪೋಸ್ಟ್ ಬಳಿ ಮಂಗಳವಾರ ತಡರಾತ್ರಿ ಈ ದಾಳಿ ನಡೆದಿದೆ.
ಪೊಲೀಸ್ ಕಟ್ಟಡದ ಹೊರಗೆ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸ್ಫೋಟದ ಸ್ಥಳದಿಂದ ಗ್ರೆನೇಡ್‌ನ ಲೆವರ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಸ್ಫೋಟದಿಂದಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ.
2018ರಲ್ಲಿ ಕಣಿವೆಯ ಬುದ್ಗಾಮ್ ಜಿಲ್ಲೆಯಲ್ಲಿ ಇದೇ ರೀತಿಯ ಗ್ರೆನೇಡ್ ಅನ್ನು ಭಯೋತ್ಪಾದಕರು ಬಳಸಿದ್ದರಿಂದ ಕೇಂದ್ರಾಡಳಿತ ಪ್ರದೇಶದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.