ಉತ್ತರ ಪ್ರದೇಶ: ಮೀರುತ್ ನಲ್ಲಿ ರುಂಡವಿಲ್ಲದ ಬಾಲಕನ ಮೃತದೇಹ ಪತ್ತೆ, ಪೊಲೀಸರಿಂದ ನರಬಲಿ ಶಂಕೆ

ಉತ್ತರ ಪ್ರದೇಶದ ಮೀರತ್​ನಲ್ಲಿ ರುಂಡವಿಲ್ಲದ ಬಾಲಕನ ಶವವೊಂದು ಪತ್ತೆಯಾಗಿದ್ದು, ಇದು ನರ ಬಲಿ ಇರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಉತ್ತರ ಪ್ರದೇಶದ ಮೀರತ್​ನಲ್ಲಿ ರುಂಡವಿಲ್ಲದ ಬಾಲಕನ ಶವವೊಂದು ಪತ್ತೆಯಾಗಿದ್ದು, ಇದು ನರ ಬಲಿ ಇರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಇಂಚೋರಿ ಪೊಲೀಸ್ ಠಾಣಾ ವ್ಯಾಪ್ತಿಯ ನಂಗ್ಲಿಶಾ ಗ್ರಾಮದಲ್ಲಿ ಘಟನೆ ನಡೆದಿದೆ. ಮೀರತ್​ನ ಹೊಲವೊಂದರಲ್ಲಿ ರುಂಡ ಇಲ್ಲದ ಶವ ಪತ್ತೆಯಾಗಿದ್ದು, ಸಾವಿಗೆ ನರಬಲಿಯೇ ಕಾರಣವಾಗಿರಬಹುದು ಶಂಕಿಸಲಾಗಿದೆ.

ನವೆಂಬರ್ 30 ರಂದು 3 ವರ್ಷದ ಬಾಲಕ ನಾಪತ್ತೆಯಾಗಿದ್ದಾನೆಂದು ಹೇಳಲಾಗಿತ್ತು. ಇದೀಗ ಬಾಲಕನ ಮೃತದೇಹ ಪತ್ತೆಯಾಗಿದೆ. ಪ್ರಕರಣ ಸಂಬಂಧ ಪೊಲೀಸರು ಇದೀಗ ಓರ್ವ ವ್ಯಕ್ತಿಯನ್ನು ಬಂಧನಕ್ಕೊಳಪಡಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ.

ನಿರಂತರ ವಿಚಾರಣೆಯ ಬಳಿಕ ಆರೋಪಿಯು ಮೀರತ್‌ನ ಕಬ್ಬಿನ ಗದ್ದೆಯಲ್ಲಿ ಮಗುವನ್ನು ಎಸೆದಿರುವುದನ್ನು ಒಪ್ಪಿಕೊಂಡಿದ್ದಾನೆ. ನಂತರ, ತಂಡವನ್ನು ಮೀರತ್‌ಗೆ ಕಳುಹಿಸಲಾಯಿತು, ಸ್ಥಳೀಯ ಪೊಲೀಸರು ಈಗಾಗಲೇ ತಲೆ ಮತ್ತು ಕೈಕಾಲು ಇಲ್ಲದ ದೇಹವನ್ನು ಪತ್ತೆ ಮಾಡಿದ್ದಾರೆ. ಸಮೀಪದಲ್ಲಿ ತಲೆ ಕೂಡ ಪತ್ತೆಯಾಗಿದೆ. ಸಾಮಾನುಗಳು ಮತ್ತು ಬಟ್ಟೆಗಳ ಆಧಾರದ ಮೇಲೆ, ಶವವು ಪ್ರೀತ್ ವಿಹಾರ್ ಪ್ರದೇಶದಲ್ಲಿ ಕಾಣೆಯಾದ ಬಾಲಕನದ್ದು ಎಂದು ಗುರುತಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ ಮತ್ತು ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಗುವಿನ ಭೀಕರ ಹತ್ಯೆಯ ಸುದ್ದಿ ಹರಡುತ್ತಿದ್ದಂತೆಯೇ ಮಗವಿನ ಕುಟುಂಬ ಮತ್ತು ಇತರ ಸ್ಥಳೀಯರು ಪ್ರತಿಭಟನೆ ನಡೆಸಿದರು. ಪ್ರೀತ್ ವಿಹಾರ್ ಪ್ರದೇಶದಲ್ಲಿ ರಸ್ತೆಯನ್ನು ತಡೆದರು. ಆಕ್ರೋಶಗೊಂಡ ಪ್ರತಿಭಟನಾಕಾರರು ಗುಂಪನ್ನು ಚದುರಿಸಲು ಯತ್ನಿಸುತ್ತಿದ್ದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com