ಗುಜರಾತ್, ಹಿಮಾಚಲ ಪ್ರದೇಶ ಜೊತೆಗೆ 4 ವಿಧಾನಸಭೆ ಮತ್ತು ಒಂದು ಲೋಕಸಭೆ ಕ್ಷೇತ್ರದ ಫಲಿತಾಂಶ ಇಂದು: ಮತ ಎಣಿಕೆ ಆರಂಭ
ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗಳ ಜೊತೆಗೆ ಆರು ವಿಧಾನಸಭೆ ಮತ್ತು ಒಂದು ಲೋಕಸಭೆ ಉಪಚುನಾವಣೆಗಳ ಮತ ಎಣಿಕೆ ಸಹ ಇಂದು ಗುರುವಾರ ಬೆಳಗ್ಗೆ 8 ಗಂಟೆಗೆ ಆರಂಭಗೊಂಡಿದೆ. ಮತ ಎಣಿಕೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದೆ ಶಾಂತಿ ಸುವ್ಯವಸ್ಥೆ ಕಾಪಾಡಲು ಮತ ಎಣಿಕೆ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಯಲ್ಲಿದೆ.
Published: 08th December 2022 08:14 AM | Last Updated: 08th December 2022 01:44 PM | A+A A-

ಗುಜರಾತ್ ವಿಧಾನಸಭೆ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಆರಂಭ
ನವದೆಹಲಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗಳ ಜೊತೆಗೆ ಆರು ವಿಧಾನಸಭೆ ಮತ್ತು ಒಂದು ಲೋಕಸಭೆ ಉಪಚುನಾವಣೆಗಳ ಮತ ಎಣಿಕೆ ಸಹ ಇಂದು ಗುರುವಾರ ಬೆಳಗ್ಗೆ 8 ಗಂಟೆಗೆ ಆರಂಭಗೊಂಡಿದೆ. ಮತ ಎಣಿಕೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದೆ ಶಾಂತಿ ಸುವ್ಯವಸ್ಥೆ ಕಾಪಾಡಲು ಮತ ಎಣಿಕೆ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಯಲ್ಲಿದೆ.
ಹಿಮಾಚಲ ಪ್ರದೇಶ, ಗುಜರಾತ್, ಒಡಿಶಾ, ಬಿಹಾರ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ಉತ್ತರ ಪ್ರದೇಶದಲ್ಲಿ ಆರು ವಿಧಾನಸಭಾ ಮತ್ತು ಒಂದು ಲೋಕಸಭೆ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಗೆ ಒಟ್ಟು 116 ಮತ ಎಣಿಕೆ ಕೇಂದ್ರಗಳಲ್ಲಿ ಇಂದು ಮತ ಎಣಿಕೆ ನಡೆಯುತ್ತಿದೆ. ಬೆಳಗ್ಗೆ 8 ಗಂಟೆಗೆ ಅಂಚೆ ಮತಪತ್ರಗಳಿಗೆ ಮತ ಎಣಿಕೆ ಕಾರ್ಯ ನಡೆಯಲಿದ್ದು, ಅದು ಪೂರ್ಣಗೊಳ್ಳುವವರೆಗೆ ಮುಂದುವರಿಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.