ಗುಜರಾತ್, ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ಫಲಿತಾಂಶ: ಮತ ಎಣಿಕೆ ಆರಂಭ, 2 ರಾಜ್ಯಗಳಲ್ಲೂ ಗೆದ್ದು ಹೊಸ ದಾಖಲೆ ನಿರ್ಮಿಸುವ ಹುಮ್ಮಸ್ಸಿನಲ್ಲಿ ಬಿಜೆಪಿ
ದೇಶದ ಗಮನ ಸೆಳೆದಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆಗಳ ಚುನಾವಣಾ ಫಲಿತಾಂಶ ಗುರುವಾರ ಹೊರಬೀಳಲಿದ್ದು, ಎರಡೂ ರಾಜ್ಯಗಳಲ್ಲಿ ಬೆಳಿಗ್ಗೆ 8 ಗಂಟೆಯಿಂದ ಮತಎಣಿಕೆ ಪ್ರಕ್ರಿಯೆ ಆರಂಭವಾಗಿದೆ.
Published: 08th December 2022 07:53 AM | Last Updated: 08th December 2022 01:35 PM | A+A A-

ಹಿಮಾಚಲ ಪ್ರದೇಶ
ನವದಹಲಿ: ದೇಶದ ಗಮನ ಸೆಳೆದಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆಗಳ ಚುನಾವಣಾ ಫಲಿತಾಂಶ ಗುರುವಾರ ಹೊರಬೀಳಲಿದ್ದು, ಎರಡೂ ರಾಜ್ಯಗಳಲ್ಲಿ ಬೆಳಿಗ್ಗೆ 8 ಗಂಟೆಯಿಂದ ಮತಎಣಿಕೆ ಪ್ರಕ್ರಿಯೆ ಆರಂಭವಾಗಿದೆ.
ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರ 2 ರಾಜ್ಯಗಳಲ್ಲಿ ಗೆಲುವು ಸಾಧಿಸಿ ಹೊಸ ದಾಖಲೆಗಳ ನಿರ್ಮಿಸುವ ಹುಮ್ಮಸ್ಸಿನಲ್ಲಿದೆ.
ಪಶ್ಚಿಮ ಬಂಗಾಳದಲ್ಲಿ ಸಿಪಿಎಂ ಪಕ್ಷವು ಸತತ 7 ಬಾರಿ ಗೆಲುವು ಸಾಧಿಸಿ, 1977 ರಿಂದ 2011ರವರಗೆ 34 ವರ್ಷಗಳ ಕಾಲ ಅಧಿಕಾರ ಸೂತ್ರ ಹಿಡಿದಿತ್ತು, ಬಿಜೆಪಿ 2022ರ ಚುನಾವಣೆಯನ್ನು ಗೆದ್ದರೆ ಈ ದಾಖಲೆಯನ್ನು ಸರಿಗಟ್ಟಿ ಅತೀ ಹೆಚ್ಚು ಅವಧಿಯವರಗೆ ರಾಜ್ಯವೊಂದರಲ್ಲಿ ಅಧಿಕಾರ ನಡೆಸಿದ 2ನೇ ರಾಜಕೀಯ ಪಕ್ಷವಾಗಿ ಹೊರಹೊಮ್ಮಲಿದೆ. ಆದರೆ, ಸಮೀಕ್ಷೆಗಳು ಈ ಬಾರಿ ಬಿಜೆಪಿ 117-151 ಸ್ಥಾನಗಳನ್ನು ಗೆಲ್ಲಬಹುದು ಎಂದು ಅಂದಾಜಿಸಿದೆ.
ಇದನ್ನೂ ಓದಿ: ಗುಜರಾತ್, ಹಿಮಾಚಲ ಪ್ರದೇಶ ಜೊತೆಗೆ 4 ವಿಧಾನಸಭೆ ಮತ್ತು ಒಂದು ಲೋಕಸಭೆ ಕ್ಷೇತ್ರದ ಫಲಿತಾಂಶ ಇಂದು ಪ್ರಕಟ: ಮತ ಎಣಿಕೆ ಆರಂಭ
ಇನ್ನೊಂದೆಡೆ ಹಿಮಾಚಲ ಪ್ರದೇಶದಲ್ಲಿ 1985ರ ನಂತರ ಯಾವುದೇ ಪಕ್ಷ ಸತತವಾಗಿ 2 ಬಾರಿ ಅಧಿಕಾರಕ್ಕೆ ಬಂದಿಲ್ಲ. ಆದರೆ, ಆ ಬಾರಿ ಬಿಜೆಪಿ ಮರಳಿ ಅಧಿಕಾರ ಸೂತ್ರ ಹಿಡಿದಲ್ಲಿ ಇದು ಮತ್ತೊಂದು ದಾಖಲೆಯೆನಿಸಿಕೊಳ್ಳಲಿದೆ.
ಗುಜರಾತ್ ರಾಜ್ಯದಲ್ಲಿ ಡಿ.1 ಹಾಗೂ 5 ರಂದು 2 ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆದಿತ್ತು. ಇದರಲ್ಲಿ ಒಟ್ಟು ಶೇ.66.31ರಷ್ಟು ಮತ ಚಲಾಯಿಸಲಾಗಿತ್ತು. ಗುಜರಾತ್ ನಲ್ಲಿ ಬಿಜೆಪಿ, ಕಾಂಗ್ರೆಸ್'ಗೆ ಪೈಪೋಟಿ ನೀಡಲು ಮೊಟ್ಟ ಮೊದಲ ಬಾರಿ ಆಮ್ ಆದ್ಮಿ ಪಕ್ಷವು ಕಣಕ್ಕಿಳಿದಿದೆ. ಆದರೆ, ತ್ರಿಕೋನ ಸ್ಪರ್ಧೆ ಹೊರತಾಗಿಯೂ ಬಿಜೆಪಿ 117-151 ಸೀಟುಗಳನ್ನು ಗೆಲ್ಲುವ ಸಾಧ್ಯತೆಗಳಿವೆ. ಕಾಂಗ್ರೆಸ್ 16-51 ಹಾಗೂ ಆಮ್ ಆದ್ಮಿ ಪಕ್ಷ 2-13 ಸೀಟುಗಳಿಗೆ ತೃಪ್ತಿ ಪಟ್ಟುಕೊಳ್ಳಬೇಕಾಗಬಹುದು ಎಂದು ಸಮೀಕ್ಷೆಗಳು ಹೇಳಿವೆ.
ಅದೇ ರೀತಿ ನ.12ರಂದು ನಡೆದ ಹಿಮಾಚಲ ಪ್ರದೇಶದ ಮತ ಎಣಿಕೆ ಕಾರ್ಯವೂ ಗುರುವಾರ ಮುಂಜಾನೆ 8 ಗಂಟೆಗೆ ಆರಂಭವಾಗಲಿದೆ. ಒಟ್ಟು ಶೇ.76.44ರಷ್ಟು ಮತದಾನ ನಡೆದಿದೆ. ಚುನಾವಣೋತ್ತರ ಸಮೀಕ್ಷೆಗಳು 68 ಸ್ಥಾನ ಹೊಂದಿರುವ ಹಿಮಾಚಲಪ್ರದೇಶದಲ್ಲಿ ಬಿಜೆಪಿ 24-41, ಕಾಂಗ್ರೆಸ್ 20-40 ಸ್ಥಾನಗೆಲ್ಲಬಹುದು ಎಂದು ಸಮೀಕ್ಷೆಗಳು ಹೇಳಿವೆ. ಬಹುಮತಕ್ಕೆ ಅದೇ ಇನ್ನೂ ಕೆಲ ಸಮೀಕ್ಷೆಗಳು ಸ್ಪಷ್ಟ ಬಹುಮತದ ಸಾಧಿಸಲಾಗದೇ ಅತಂತ್ರ ಸ್ಥಿತಿ ನಿರ್ಮಾಣವೂ ಆಗಬಹುದು ಎಂದು ಹೇಳಿವ. ಹೀಗಾಗಿ ಹಿಮಾಚಲ ಪ್ರದೇಶದಲ್ಲಿ ಪ್ರತಿ 5 ವರ್ಷಗಳಿಗೊಮ್ಮೆ ಸರ್ಕಾರ ಬದಲಾಗುವ ಪ್ರವೃತ್ತಿ ಈ ಬಾರಿ ಬ್ರೇಕ್ ಬೀಳಬಹುದೇ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಇದನ್ನೂ ಓದಿ: ಗುಜರಾತ್‌ನಲ್ಲಿ ಎಕ್ಸಿಟ್ ಪೋಲ್ ಭವಿಷ್ಯ ಸುಳ್ಳಾಗಬಹುದು: ಪಂಜಾಬ್ ಸಿಎಂ ಮಾನ್
ಎರಡು ವಿಧಾನಸಭೆಗಳು ಹಾಗೂ ಏಳು ಉಪಚುನಾವಣೆಗಳ ಮತ ಎಣಿಕೆಗೆ ಸಂಬಂಧಿಸಿದಂತೆ ಒಟ್ಟಾರೆ 116 ಮತ ಎಣಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ಒಬ್ಬ ಮತ ಎಣಿಕೆ ವೀಕ್ಷಕರನ್ನು ನಿಯೋಜಿಸಲಾಗಿದೆ. ಅದರಲ್ಲೂ ಹಿಮಾಚಲ ಪ್ರದೇಶ ಮತ್ತು ಗುಜರಾತ್‌ನಲ್ಲಿ ತಲಾ ಇಬ್ಬರು ವಿಶೇಷ ವೀಕ್ಷಕರನ್ನು ನೇಮಿಸಲಾಗಿದೆ.