ಗುಜರಾತ್ ಜನಾದೇಶವನ್ನು ನಮ್ರತೆಯಿಂದ ಒಪ್ಪಿಕೊಳ್ಳುತ್ತೇವೆ: ರಾಹುಲ್ ಗಾಂಧಿ
ಗುಜರಾತಿನಲ್ಲಿ ಕಾಂಗ್ರೆಸ್ ಹೀನಾಯ ಸೋಲನುಭವಿಸಿದ್ದು, ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಜನಾದೇಶವನ್ನು ನಮ್ರತೆಯಿಂದ ಒಪ್ಪಿಕೊಳ್ಳುವುದಾಗಿ ಗುರುವಾರ ಹೇಳಿದ್ದಾರೆ.
Published: 08th December 2022 07:14 PM | Last Updated: 08th December 2022 07:14 PM | A+A A-

ರಾಹುಲ್ ಗಾಂಧಿ
ನವದೆಹಲಿ: ಗುಜರಾತಿನಲ್ಲಿ ಕಾಂಗ್ರೆಸ್ ಹೀನಾಯ ಸೋಲನುಭವಿಸಿದ್ದು, ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಜನಾದೇಶವನ್ನು ನಮ್ರತೆಯಿಂದ ಒಪ್ಪಿಕೊಳ್ಳುದಾಗಿ ಗುರುವಾರ ಹೇಳಿದ್ದಾರೆ.
ಗುಜರಾತ್ ಜನಾದೇಶವನ್ನು ಒಪ್ಪಿಕೊಳ್ಳುತ್ತೇನೆ ಮತ್ತು ಅವರ ಹಕ್ಕುಗಳಿಗಾಗಿ, ದೇಶದ ಆದರ್ಶಗಳಿಗಾಗಿ ತಮ್ಮ ಹೋರಾಟ ಮುಂದುವರಿಯಲಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ತಿಳಿಸಿದ್ದಾರೆ.
ಇದನ್ನು ಓದಿ: ಸೋಲಿನ ನೈತಿಕ ಹೊಣೆಹೊತ್ತು ಗುಜರಾತ್ ಕಾಂಗ್ರೆಸ್ ಉಸ್ತುವಾರಿ ರಾಜೀನಾಮೆ
"ನಾವು ಗುಜರಾತಿನ ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇವೆ. ನಾವು ಪಕ್ಷವನ್ನು ಮರುಸಂಘಟನೆ ಮಾಡುತ್ತೇವೆ ಮತ್ತು ದೇಶದ ಆದರ್ಶಗಳು ಮತ್ತು ರಾಜ್ಯದ ಜನರ ಹಕ್ಕುಗಳಿಗಾಗಿ ಹೋರಾಟವನ್ನು ಮುಂದುವರಿಸುತ್ತೇವೆ" ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಗುಜರಾತ್‌ನಲ್ಲಿ ಕಳೆದ 2017ರ ವಿಧಾನಸಭಾ ಚುನಾವಣೆಯಲ್ಲಿ 77 ಸ್ಥಾನಗಳನ್ನು ಗೆಲ್ಲುವ ಮೂಲಕ ಆಡಳಿತರೂಢ ಬಿಜೆಪಿಗೆ ಕಠಿಣ ಸ್ಪರ್ಧೆ ನೀಡಿದ್ದ ಕಾಂಗ್ರೆಸ್ ಈ ಬಾರಿ ಕೇವಲ 17 ಸ್ಥಾನಗಳಿದೆ ತೃಪ್ತಿ ಪಟ್ಟಿದೆ.