ಗುಜರಾತ್ ಚುನಾವಣೆಯೊಂದಿಗೆ ಎಎಪಿಗೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಸಿಗಲಿದೆ: ಮನೀಶ್ ಸಿಸೋಡಿಯಾ

ಗುಜರಾತ್ ವಿಧಾನಸಭಾ ಚುನಾವಣೆಯು ಆಮ್ ಆದ್ಮಿ ಪಕ್ಷವನ್ನು (ಎಎಪಿ) ರಾಷ್ಟ್ರಮಟ್ಟಕ್ಕೆ ಏರಿಸಲಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಗುರುವಾರ ತಿಳಿಸಿದ್ದಾರೆ.
ಮನೀಶ್ ಸಿಸೋಡಿಯಾ
ಮನೀಶ್ ಸಿಸೋಡಿಯಾ

ನವದೆಹಲಿ: ಗುಜರಾತ್ ವಿಧಾನಸಭಾ ಚುನಾವಣೆಯು ಆಮ್ ಆದ್ಮಿ ಪಕ್ಷವನ್ನು (ಎಎಪಿ) ರಾಷ್ಟ್ರಮಟ್ಟಕ್ಕೆ ಏರಿಸಲಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಗುರುವಾರ ತಿಳಿಸಿದ್ದಾರೆ.

'ಗುಜರಾತ್ ಮತಗಳ ಮೂಲಕ ಎಎಪಿ ರಾಷ್ಟ್ರೀಯ ಪಕ್ಷವಾಗುತ್ತಿದೆ. ಪ್ರಥಮ ಬಾರಿಗೆ ದೇಶದಲ್ಲಿ ಶಿಕ್ಷಣ ಮತ್ತು ಆರೋಗ್ಯ ಆಧಾರಿತ ರಾಜಕಾರಣಕ್ಕೆ ಮನ್ನಣೆ ದೊರೆಯುತ್ತಿದೆ. ಭಾರತದ ಜನತೆಗೆ ಅಭಿನಂದನೆಗಳು' ಎಂದು ಸಿಸೋಡಿಯಾ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಆದಾಗ್ಯೂ, ಮತ ಎಣಿಕೆಯ ಆರಂಭಿಕ ಟ್ರೆಂಡ್‌ಗಳು ಗುಜರಾತ್‌ನಲ್ಲಿ 154 ವಿಧಾನಸಭಾ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಕೇಸರಿ ಪಕ್ಷವು ತನ್ನ ಅತ್ಯುತ್ತಮ ಪ್ರದರ್ಶನದ ಹಾದಿಯಲ್ಲಿದೆ ಎಂದು ಸೂಚಿಸುತ್ತದೆ. ಆದರೆ, ಕಾಂಗ್ರೆಸ್ ಕೇವಲ 20 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಈಮಧ್ಯೆ, ಗುಜರಾತ್‌ನಲ್ಲಿ ಮೊದಲ ಬಾರಿಗೆ ತ್ರಿಕೋನ ಸ್ಪರ್ಧೆಯನ್ನು ಮಾಡಲು ಆಕ್ರಮಣಕಾರಿ ಪ್ರಚಾರವನ್ನು ಪ್ರಾರಂಭಿಸಿದ್ದ ಎಎಪಿ ಆರು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ದೆಹಲಿ ಮತ್ತು ಪಂಜಾಬ್‌ನಲ್ಲಿ ಎಎಪಿ ಸರ್ಕಾರದೊಂದಿಗೆ ಪಕ್ಷವು ರಾಜ್ಯ ಪಕ್ಷದ ಸ್ಥಾನಮಾನವನ್ನು ಸಾಧಿಸಿದೆ ಮತ್ತು ರಾಷ್ಟ್ರೀಯ ಪಕ್ಷವಾಗುವ ಅದೃಷ್ಟವು ಗುಜರಾತ್ ವಿಧಾನಸಭಾ ಚುನಾವಣಾ ಫಲಿತಾಂಶ 2022ರ ಮೇಲೆ ಅವಲಂಬಿತವಾಗಿದೆ.

ರಾಷ್ಟ್ರೀಯ ಪಕ್ಷವಾಗಿ ಸ್ಥಾನಮಾನ ಪಡೆಯಬೇಕೆಂದರೆ, ದೇಶದ ಯಾವುದೇ ರಾಜಕೀಯ ಪಕ್ಷವು ಕನಿಷ್ಠ ಮೂರು ರಾಜ್ಯಗಳಿಂದ ಲೋಕಸಭೆಯಲ್ಲಿ ಶೇ 2 ರಷ್ಟು ಸ್ಥಾನಗಳನ್ನು ಗೆಲ್ಲಬೇಕು. ಲೋಕಸಭೆ ಅಥವಾ ವಿಧಾನಸಭೆಗೆ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷವು ಯಾವುದೇ ನಾಲ್ಕು ಅಥವಾ ಹೆಚ್ಚಿನ ರಾಜ್ಯಗಳಲ್ಲಿ ಶೇ 6 ರಷ್ಟು ಮತಗಳನ್ನು ಪಡೆಯಬೇಕಿರುತ್ತದೆ ಅಥವಾ ಹೆಚ್ಚುವರಿಯಾಗಿ ನಾಲ್ಕು ಲೋಕಸಭಾ ಸ್ಥಾನಗಳನ್ನು ಗೆಲ್ಲಬೇಕಾಗುತ್ತದೆ. ರಾಜ್ಯ ಪಕ್ಷದ ಸ್ಥಾನಮಾನ ಪಡೆಯಲು ಕನಿಷ್ಠ ಎರಡು ಸ್ಥಾನ ಹಾಗೂ ಶೇ.6 ರಷ್ಟು ಮತಗಳನ್ನು ಗಳಿಸಬೇಕು.

ಗುಜರಾತ್ ವಿಧಾನಸಭೆ ಚುನಾವಣೆ ಫಲಿತಾಂಶದ ನಂತರ ಎಎಪಿ ನಾಲ್ಕು ರಾಜ್ಯಗಳಲ್ಲಿ ಗುಜರಾತ್, ದೆಹಲಿ, ಪಂಜಾಬ್ ಮತ್ತು ಗೋವಾದಲ್ಲಿ ರಾಜ್ಯ ಪಕ್ಷವಾಗಲಿದೆ. ಇದು ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ಪಡೆಯುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com