ಹಿಮಾಚಲ ಪ್ರದೇಶ: 4 ಲೋಕಸಭಾ ಕ್ಷೇತ್ರಗಳ ಪೈಕಿ 3 ರಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆ

ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ 25 ಸ್ಥಾನಗಳನ್ನು ಗೆದ್ದಿರುವ ಬಿಜೆಪಿಗೆ ಶಿಮ್ಲಾ, ಹಮೀರ್ ಪುರ ಮತ್ತು ಕಾಂಗ್ರಾ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತೀವ್ರ ಹೊಡೆತ ಬಿದ್ದಿದೆ. ಆದಾಗ್ಯೂ, ಮಂಡಿ ಲೋಕಸಭಾ ಕ್ಷೇತ್ರದಲ್ಲಿ ಪಕ್ಷ ಉತ್ತಮ ಸಾಧನೆ ಮಾಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ 25 ಸ್ಥಾನಗಳನ್ನು ಗೆದ್ದಿರುವ ಬಿಜೆಪಿಗೆ ಶಿಮ್ಲಾ, ಹಮೀರ್ ಪುರ ಮತ್ತು ಕಾಂಗ್ರಾ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತೀವ್ರ ಹೊಡೆತ ಬಿದ್ದಿದೆ. ಆದಾಗ್ಯೂ, ಮಂಡಿ ಲೋಕಸಭಾ ಕ್ಷೇತ್ರದಲ್ಲಿ ಪಕ್ಷ ಉತ್ತಮ ಸಾಧನೆ ಮಾಡಿದೆ.

68 ಸದಸ್ಯ ಬಲದ ವಿಧಾನಸಭೆಯಲ್ಲಿ 40 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಹಿಮಾಚಲ ಪ್ರದೇಶವನ್ನು ಬಿಜೆಪಿಯಿಂದ ಕಸಿದುಕೊಂಡಿದೆ. ಹಳೆಯ ಪಿಂಚಣಿ ಮರು ಜಾರಿ ಭರವಸೆ ಕಾಂಗ್ರೆಸ್ ಪಕ್ಷಕ್ಕೆ ನೆರವು ನೀಡಿದ್ದರೆ ಸೇಬು ಬೆಳೆಗಾರರ ಸಮಸ್ಯೆಗಳು ಬಿಜೆಪಿಗೆ 20 ಕ್ಷೇತ್ರಗಳಲ್ಲಿ ಕಂಟಕವಾಗಿ ಪರಿಣಮಿಸಿತ್ತು. ನಿರುದ್ಯೋಗ, ಹಣದುಬ್ಬರ, ಆಡಳಿತ ವಿರೋಧಿ ಅಲೆಯಿಂದ ಮತದಾರರ ಬೇಸತ್ತಿದ್ದರು ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ.

ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧದ ಅಸಮಾಧಾನ ಅಲ್ಲದೇ ಹಳೆಯ ಪಿಂಚಣಿ ಯೋಜನೆ ಮರು ಜಾರಿ ನೌಕರರ ಪ್ರಮುಖ ಬೇಡಿಕೆಯಾಗಿತ್ತು ಎಂದು ಹಿಮಾಚಲ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಪ್ರೊಫೆಸರ್ ಒಬ್ಬರು ಹೇಳುತ್ತಾರೆ. ನಿರ್ಗಮಿತ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರ ಜನಪ್ರಿಯತೆ ಮಂಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿಗೆ ನೆರವಾಗಿದೆ.

ಕಳೆದ ವರ್ಷ ಮಂಡಿ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ಗೆದಿತ್ತು. ಆದರೆ, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಇಲ್ಲಿನ 17 ಸ್ಥಾನಗಳ ಪೈಕಿ ಕೇವಲ 5 ರಲ್ಲಿ ಕಾಂಗ್ರೆಸ್ ಗೆದ್ದಿದೆ. ಇನ್ನೂ ಹಮೀರ್ ಪುರದಲ್ಲಿ  ಬಿಜೆಪಿ ಸಂಪುಟದಲ್ಲಿ ಸ್ಥಾನದಲ್ಲಿ ಸ್ಥಾನ ನೀಡದೆ ಇದದ್ದು ಹಾಗೂ ಮಾಜಿ ಮುಖ್ಯಮಂತ್ರಿ ಪ್ರೇಮ್ ಕುಮಾರ್ ಧುಮಲ್ ಅವರ ಕಡೆಗಣನೆ ಬಿಜೆಪಿಗೆ ಮುಳುವಾಗಿ ಪರಿಣಮಿಸಿದೆ.

ಇಲ್ಲಿನ 17 ಅಸೆಂಬ್ಲಿ ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಮತ್ತು ಪಕ್ಷೇತರರು 13 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.  ಕಾಂಗ್ರಾ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬ್ರಾಹ್ಮಣರ ನಿರ್ಲಕ್ಷ್ಯ ಮತ್ತು ಮಂಡಿ ಜಿಲ್ಲೆಯಲ್ಲಿ ಮಾತ್ರ ಅಭಿವೃದ್ಧಿ ಕೆಲಸಗಳಿಂದ ಜನರು ಅಸಮಾಧಾನಗೊಂಡಿದ್ದರು. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com