
ಎಎಪಿ ಕಾರ್ಯಕರ್ತರ ವಿಜಯೋತ್ಸವ
ನವದೆಹಲಿ: ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಹುಮತ ಪಡೆದಿರುವ ಆಮ್ ಆದ್ಮಿ ಪಕ್ಷದವರು ಮುಂದಿನ ದೆಹಲಿ ಮೇಯರ್ ಆಗಲಿದ್ದಾರೆ ಎಂದು ಬಿಜೆಪಿ ಶುಕ್ರವಾರ ಹೇಳಿದೆ.
"ಎಂಸಿಡಿಯಲ್ಲಿ ಬಿಜೆಪಿ ಪ್ರಬಲ ಪ್ರತಿಪಕ್ಷದ ಪಾತ್ರವನ್ನು ನಿರ್ವಹಿಸುತ್ತದೆ" ಎಂದು ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ಇಂದು ಎನ್‌ಡಿಟಿವಿಗೆ ತಿಳಿಸಿದ್ದಾರೆ.
ತಮ್ಮ ಪಕ್ಷವು ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ ಮತ್ತು ಎಂಸಿಡಿಯ "ಕಾವಲುಗಾರ"ನಂತೆ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದ್ದಾರೆ.
ಇದನ್ನು ಓದಿ: ದೆಹಲಿ ಮಹಾನಗರ ಪಾಲಿಕೆ ಚುನಾವಣೆ: ಗೆದ್ದ 134 ಎಎಪಿ ಅಭ್ಯರ್ಥಿಗಳಲ್ಲಿ 69 ಮಂದಿ ಮಹಿಳೆಯರು!
ಎಂಸಿಡಿ ಚುನಾವಣೆಯಲ್ಲಿ ಎಎಪಿ ಬಹುಮತ ಪಡೆದಿರಬಹುದು. ಆದರೆ ಮುಂದೆ ಮೇಯರ್ ಚುನಾವಣೆ ಇದೆ ಎಂದು ಹೇಳುವ ಮೂಲಕ ಮೇಯರ್ ಚುನಾವಣೆಯಲ್ಲಿ ಸ್ಪರ್ಧಿಸುವ ಸೂಚನೆ ನೀಡಿತ್ತು.
ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಎಎಪಿ 134 ವಾರ್ಡ್‌ಗಳನ್ನು ಗೆಲ್ಲುವ ಮೂಲಕ ಬಿಜೆಪಿಯ 15 ವರ್ಷಗಳ ಆಡಳಿತವನ್ನು ಕೊನೆಗೊಳಿಸಿದೆ.