
ಅಫ್ತಾಬ್
ನವದೆಹಲಿ: ಅಫ್ತಾಬ್ ಅಮೀನ್ ಪೂನಾವಾಲಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ಸಾಕೇತ್ ನ್ಯಾಯಾಲಯವು 14 ದಿನಗಳವರೆಗೆ ವಿಸ್ತರಿಸಿದೆ.
ಶ್ರದ್ಧಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅಫ್ತಾಬ್'ನನ್ನು ಇಂದು ನ್ಯಾಯಾಲಯಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಯಿತು.
ದೆಹಲಿ ಪೊಲೀಸರು ನ್ಯಾಯಾಂಗ ಬಂಧನವನ್ನು ವಿಸ್ತರಿಸುವಂತೆ ಕೋರಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಹೇಳಿದರು. ವಿಚಾರಣೆಯ ನಂತರ ನ್ಯಾಯಾಲಯವು ಪೂನಾವಾಲಾನ ನ್ಯಾಯಾಂಗ ಬಂಧನವನ್ನು ವಿಸ್ತರಿಸಿತು.
ಇದನ್ನೂ ಓದಿ: ಶ್ರದ್ಧಾ ವಾಕರ್ ಹತ್ಯೆ ಕೇಸ್: ಅಫ್ತಾಬ್ ಮಂಪರು ಪರೀಕ್ಷೆ ಯಶಸ್ವಿ- ಅಧಿಕಾರಿಗಳು
ಇದಕ್ಕೂ ಮುನ್ನ ನ್ಯಾಯಾಲಯವು ಅಫ್ತಾಬ್‌ನನ್ನು 13 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದು ಅದು ಇಂದಿಗೆ ಕೊನೆಗೊಳ್ಳಲಿದೆ.
ಅಫ್ತಾಬ್ ಪೂನವಾಲಾ ದೆಹಲಿಯ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ತನ್ನೊಂದಿಗಿದ್ದ ಪ್ರೇಯಸಿ ಶ್ರದ್ಧಾಳನ್ನು ಕೊಂದು ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿರಿಸಿ ನಂತರ ಮೃತ ದೇಹದ ಭಾಗಗಳನ್ನು ರಾಷ್ಟ್ರ ರಾಜಧಾನಿಯಾದ್ಯಂತ ವಿವಿಧ ಸ್ಥಳಗಳಲ್ಲಿ ಎಸೆದಿದ್ದ.
ಅಫ್ತಾಬ್‌ನಲ್ಲಿ ಪಾಲಿಗ್ರಾಫ್ ಮತ್ತು ನಾರ್ಕೋ ಪರೀಕ್ಷೆಗಳನ್ನು ನಡೆಸಲಾಗಿದ್ದು, ಪೊಲೀಸರು ಈಗ ತಮ್ಮ ಪ್ರಕರಣವನ್ನು ಬಲಪಡಿಸಲು ಎಫ್‌ಎಸ್‌ಎಲ್ ವರದಿಗಾಗಿ ಕಾಯುತ್ತಿದ್ದಾರೆ.