ಹಿಮಾಚಲ ಪ್ರದೇಶ ನೂತನ ಸಿಎಂ ಆಗಿ ಸುಖ್ವಿಂದರ್ ಸಿಂಗ್, ಡಿಸಿಎಂ ಆಗಿ ಮುಕೇಶ್ ಅಗ್ನಿಹೋತ್ರಿ ನಾಳೆ ಪ್ರಮಾಣ

ಹಿಮಾಚಲ ಪ್ರದೇಶ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಸುಖ್ವಿಂದರ್ ಸಿಂಗ್ ಸುಖು ಅವರು ಹಿಮಾಚಲ ಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಅಗ್ನಿಹೋತ್ರಿ ಅವರು ಭಾನುವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಸುಖ್ವಿಂದರ್ ಸಿಂಗ್ - ಮುಕೇಶ್ ಅಗ್ನಿಹೋತ್ರಿ
ಸುಖ್ವಿಂದರ್ ಸಿಂಗ್ - ಮುಕೇಶ್ ಅಗ್ನಿಹೋತ್ರಿ

ಶಿಮ್ಲಾ: ಹಿಮಾಚಲ ಪ್ರದೇಶ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಸುಖ್ವಿಂದರ್ ಸಿಂಗ್ ಸುಖು ಅವರು ಹಿಮಾಚಲ ಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಅಗ್ನಿಹೋತ್ರಿ ಅವರು ಭಾನುವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸುಖ್ವಿಂದರ್ ಸಿಂಗ್ ಅವರನ್ನು ಮುಖ್ಯಮಂತ್ರಿಯಾಗಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಅಗ್ನಿಹೋತ್ರಿ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಶನಿವಾರ ಆಯ್ಕೆ ಮಾಡಿದೆ. 

ಇಂದು ಸಂಜೆ ಸುಖು ಅವರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಘೋಷಿಸಿದ ನಂತರ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.

ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಪಕ್ಷದ ಅಧ್ಯಕ್ಷರಿಗೆ ಅಧಿಕಾರ ನೀಡುವ ನಿರ್ಣಯವನ್ನು ಹೊಸದಾಗಿ ಆಯ್ಕೆಯಾದ ಕಾಂಗ್ರೆಸ್ ಶಾಸಕರು ಸರ್ವಾನುಮತದಿಂದ ಅಂಗೀಕರಿಸಿದ ಒಂದು ದಿನದ ನಂತರ ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯನ್ನು ಹೈಕಮಾಂಡ್ ಆಯ್ಕೆ ಮಾಡಿದೆ. ಸುಖ್ವಿಂದರ್ ಸಿಂಗ್ ಸುಖು ಅವರು ನಾಳೆ ಬೆಳಗ್ಗೆ 11 ಗಂಟೆಗೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇನ್ನು ಹರೋಲಿಯಿಂದ ಐದು ಬಾರಿ ಶಾಸಕರಾಗಿರುವ ಪ್ರತಿಪಕ್ಷ ನಾಯಕ ಮುಕೇಶ್ ಅಗ್ನಿಹೋತ್ರಿ ಅವರು ರಾಜ್ಯದ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

ರಾಜ್ಯ ಕಾಂಗ್ರೆಸ್ ಮುಖ್ಯಸ್ಥೆ ಪ್ರತಿಭಾ ಸಿಂಗ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಮುಖೇಶ್ ಅಗ್ನಿಹೋತ್ರಿ ಮತ್ತು ಚುನಾವಣಾ ಪ್ರಚಾರ ಸಮಿತಿಯ ಮುಖ್ಯಸ್ಥ ಸುಖ್ವಿಂದರ್ ಸಿಂಗ್ ಸುಖು ಸೇರಿದಂತೆ ಹಲವು ನಾಯಕರು ಮುಖ್ಯಮಂತ್ರಿ ರೇಸ್ ನಲ್ಲಿದ್ದರು. ಅಂತಿಮವಾಗಿ ಸುಖ್ವಿಂದರ್ ಸಿಂಗ್ ಸುಖು ಅವರನ್ನು ಹೈಕಮಾಂಡ್ ಆಯ್ಕೆ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com