ಥಾಣೆ: ಗರ್ಭಿಣಿ ಮಹಿಳೆಗೆ ಖಾಸಗಿ ಅಂಗ ತೋರಿಸಿ ಲೈಂಗಿಕ ಕಿರುಕುಳ; ಯುವಕನ ಬಂಧನ
ಮಹಾರಾಷ್ಟ್ರದ ಥಾಣೆ ನಗರದ ಮುಂಬ್ರಾದಲ್ಲಿ ಗರ್ಭಿಣಿ ಮಹಿಳೆಯನ್ನು ಹಿಂಬಾಲಿಸಿ, ಖಾಸಗಿ ಅಂಗ ತೋರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 19 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
Published: 10th December 2022 03:14 PM | Last Updated: 10th December 2022 03:14 PM | A+A A-

ಸಾಂದರ್ಭಿಕ ಚಿತ್ರ
ಥಾಣೆ: ಮಹಾರಾಷ್ಟ್ರದ ಥಾಣೆ ನಗರದ ಮುಂಬ್ರಾದಲ್ಲಿ ಗರ್ಭಿಣಿ ಮಹಿಳೆಯನ್ನು ಹಿಂಬಾಲಿಸಿ, ಖಾಸಗಿ ಅಂಗ ತೋರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 19 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಈ ಘಟನೆ ಗುರುವಾರ ನಡೆದಿದ್ದು, ಮರುದಿನ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
"ಸಂತ್ರಸ್ತ ಮಹಿಳೆ ಅಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ತನ್ನ ಅತ್ತೆಯ ಮನೆಯಿಂದ ತನ್ನ ಪೋಷಕರ ಮನೆಗೆ ಹಿಂದಿರುಗುತ್ತಿದ್ದಾಗ, ಆರೋಪಿ ಅವರನ್ನು ಹಿಂಬಾಲಿಸಿದನು. ಮಹಿಳೆ ತನ್ನ ವಸತಿ ಕಟ್ಟಡವನ್ನು ತಲುಪಿದಾಗ ಯುವಕ ತನ್ನ ಖಾಸಗಿ ಅಂಗವನ್ನು ತೋರಿಸಿ, ಲೈಂಗಿಕ ಕಿರುಕುಳ ನೀಡಿದ್ದಾನೆ" ಎಂದು ಮುಂಬ್ರಾ ಪೊಲೀಸ್ ಸಹಾಯಕ ಇನ್ಸ್‌ಪೆಕ್ಟರ್ ಕೃಪಾಲಿ ಬೋರ್ಸೆ ತಿಳಿಸಿದ್ದಾರೆ.
ಸ್ಥಳದಿಂದ ಪರಾರಿಯಾಗುವ ಮೊದಲು ಮಹಿಳೆಗೆ ಬೆದರಿಕೆ ಹಾಕಿದ್ದಾನೆ ಎಂದು ಅವರು ಹೇಳಿದ್ದಾರೆ.
ಸಂತ್ರಸ್ತೆ ನಂತರ ಪೊಲೀಸರನ್ನು ಸಂಪರ್ಕಿಸಿ, ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಮುಂಬ್ರಾ ಪೊಲೀಸರು ಭಾರತೀಯ ದಂಡ ಸಂಹಿತೆ(IPC) ಸೆಕ್ಷನ್ 354. 354 (ಡಿ), 504, ಮತ್ತು 506 ಅಡಿಯಲ್ಲಿ ದಾಖಲಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
"ಆರೋಪಿಯನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ಪೊಲೀಸರು ಒಂದೆರಡು ತಂಡಗಳನ್ನು ರಚಿಸಿದರು. ನಂತರ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ಮುಂಬ್ರಾದ ಅಮೃತ್ ನಗರ ಪ್ರದೇಶದಲ್ಲಿ ವಾಸಿಸುವ ವ್ಯಕ್ತಿಯನ್ನು ಬಂಧಿಸಿದ್ದಾರೆ" ಎಂದು ಬೋರ್ಸೆ ಹೇಳಿದ್ದಾರೆ.