ಈ ಬಾರಿಯ ಮೋದಿ- ಪುಟಿನ್ ವಾರ್ಷಿಕ ಶೃಂಗಸಭೆ ರದ್ದು?

ದಿನಾಂಕ ನಿಗದಿಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಈ ವರ್ಷ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನಡೆಸಬೇಕಾಗಿದ್ದ ವಾರ್ಷಿಕ ದ್ವಿಪಕ್ಷೀಯ ಶೃಂಗಸಭೆ ಈ ಬಾರಿ ನಡೆಯುವ ಸಾಧ್ಯತೆಯಿಲ್ಲ ಎಂದು ಮೂಲಗಳು ಹೇಳಿವೆ.
ಮೋದಿ- ಪುಟಿನ್
ಮೋದಿ- ಪುಟಿನ್

ನವದೆಹಲಿ: ದಿನಾಂಕ ನಿಗದಿಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಈ ವರ್ಷ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನಡೆಸಬೇಕಾಗಿದ್ದ ವಾರ್ಷಿಕ ದ್ವಿಪಕ್ಷೀಯ ಶೃಂಗಸಭೆ ಈ ಬಾರಿ ನಡೆಯುವ ಸಾಧ್ಯತೆಯಿಲ್ಲ ಎಂದು ಮೂಲಗಳು ಹೇಳಿವೆ.

ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಪುಟಿನ್ ಅವರನ್ನು ಭೇಟಿಯಾಗುತ್ತಲ್ಲ, ದಿನಾಂಕ ಸಮಸ್ಯೆಯಿಂದಾಗಿ ಸಭೆ ನಡೆಯುತ್ತಿಲ್ಲ ಎಂದು ಮೂಲಗಳು ತಿಳಿಸಿರುವುದಾಗಿ ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಭಾರತದ ಪ್ರಧಾನ ಮಂತ್ರಿ ಮತ್ತು ರಷ್ಯಾ ಅಧ್ಯಕ್ಷರ ನಡುವಣದ ವಾರ್ಷಿಕ ಶೃಂಗಸಭೆ ಉಭಯ ದೇಶಗಳ ನಡುವಣ ದ್ವಿಪಕ್ಷೀಯ ಬಾಂಧವ್ಯದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

ಉಕ್ರೇನ್ ಯುದ್ಧದಲ್ಲಿ ಪರಮಾಣು ಅಸ್ತ್ರ ಬಳಸುವುದಾಗಿ ರಷ್ಯಾ ಅಧ್ಯಕ್ಷರು ಬೆದರಿಕೆ ಹಾಕಿರುವುದರಿಂದ ಈ ಬಾರಿ ಉಭಯ ನಾಯಕರ ಭೇಟಿ ರದ್ದಾಗುವ ಸಾಧ್ಯತೆಯಿರುವುದಾಗಿ ಅನೇಕ ಮಾಧ್ಯಮಗಳು ವರದಿ ಮಾಡಿವೆ. 2000ರಿಂದಲೂ ಭಾರತ- ರಷ್ಯಾ ನಡುವಣ ವಾರ್ಷಿಕ ಶೃಂಗಸಭೆಯ ಸಂಪ್ರದಾಯ ನಡೆಯುತ್ತಾ ಬಂದಿದೆ.

ಕಳೆದ ವರ್ಷ ನವದೆಹಲಿಯ ಹೈದ್ರಾಬಾದ್ ಹೌಸ್ ನಲ್ಲಿ ನಡೆದ ಶೃಂಗಸಭೆಯಲ್ಲಿ ಪುಟಿನ್ ಪಾಲ್ಗೊಂಡಿದ್ದರು. ಈ ವರ್ಷ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಮಾಸ್ಕೋಗೆ ತೆರಳಬೇಕಿತ್ತು. ಆದರೆ, ಮೋದಿ ಈ ಬಾರಿ ರಷ್ಯಾಗೆ ತೆರಳುತ್ತಿಲ್ಲ ಎಂದು ಮೂಲಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com