2ನೇ ಬಾರಿ ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣ; ಪ್ರಧಾನಿ ಮೋದಿ, ಬಿಜೆಪಿ ಸಿಎಂಗಳು ಭಾಗಿ

ಬಿಜೆಪಿ ನಾಯಕ ಭೂಪೇಂದ್ರ ಪಟೇಲ್ ಅವರು ಎರಡನೇ ಬಾರಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.
ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣ
ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣ

ಗಾಂಧಿನಗರ: ಬಿಜೆಪಿ ನಾಯಕ ಭೂಪೇಂದ್ರ ಪಟೇಲ್ ಅವರು ಎರಡನೇ ಬಾರಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.

ಇಂದು ಮಧ್ಯಾಹ್ನ ಗಾಂಧಿನಗರದ ಹೊಸ ಸಚಿವಾಲಯದ ಹೆಲಿಪ್ಯಾಡ್  ಗ್ರೌಂಡ್ ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಭೂಪೇಂದ್ರ ಪಟೇಲ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಭೂಪೇಂದ್ರ ಪಟೇಲ್ ಅವರು ಗುಜರಾತ್ 18ನೇ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಮತ್ತು ಇತರ ಕೇಂದ್ರ ಸಚಿವರುಗಳು ಹಾಗೂ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.

ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಹ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com