ಶರದ್ ಪವಾರ್‌ಗೆ ಕೊಲೆ ಬೆದರಿಕೆ ಹಾಕಿದ ಬಿಹಾರದ ವ್ಯಕ್ತಿ ಬಂಧನ

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಅವರ ಮುಂಬೈ ನಿವಾಸಕ್ಕೆ ಪದೇ ಪದೇ ಬೆದರಿಕೆ ಕರೆ ಮಾಡುತ್ತಿದ್ದ ವ್ಯಕ್ತಿಯನ್ನು ಬಿಹಾರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಶರದ್ ಪವಾರ್
ಶರದ್ ಪವಾರ್

ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಅವರ ಮುಂಬೈ ನಿವಾಸಕ್ಕೆ ಪದೇ ಪದೇ ಬೆದರಿಕೆ ಕರೆ ಮಾಡುತ್ತಿದ್ದ ವ್ಯಕ್ತಿಯನ್ನು ಬಿಹಾರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ಎನ್ ಸೋನಿ(45) ಎಂದು ಗುರುತಿಸಲಾಗಿದ್ದು, ಮುಂಬೈ ಪೊಲೀಸ್ ತಂಡ ಇಂದು ಪಾಟ್ನಾದಲ್ಲಿ ಆರೋಪಿಯನ್ನು ಬಂಧಿಸಿದ್ದು, ಮುಂಬೈಗೆ ಕರೆತರಲಾಗುತ್ತಿದೆ ಎಂದು ಗಾಮ್‌ದೇವಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೋನಿ ಕಳೆದ ಮೂರ್ನಾಲ್ಕು ತಿಂಗಳಿಂದ ಪವಾರ್ ಅವರ ಬಂಗಲೆ ಸಿಲ್ವರ್ ಓಕ್ ಗೆ ಕರೆ ಮಾಡುದ್ದ ಎನ್ನಲಾಗಿದೆ. ಕರೆ ಮಾಡಿ ಅಶ್ಲೀಲ ಪದಗಳನ್ನು ಬಳಸಿದ್ದಲ್ಲದೆ, ಪವಾರ್ ನಿವಸದಲ್ಲಿ ಕರ್ತವ್ಯದಲ್ಲಿದ್ದ ಕಾನ್‌ಸ್ಟೆಬಲ್‌ಗೆ ನಾನು ಮುಂಬೈಗೆ ಬಂದು ನಿಮ್ಮನ್ನು ದೇಶ ನಿರ್ಮಿತ ಗನ್‌ನಿಂದ ಶೂಟ್ ಮಾಡುತ್ತೇನೆ" ಎಂದು ಬೆದರಿಕೆ ಹಾಕಿದ್ದನು ಎಂದು ಅಧಿಕಾರಿ ಹೇಳಿದ್ದಾರೆ.

ಪೊಲೀಸರು ಆತನ ಮೊಬೈಲ್ ಸಂಖ್ಯೆಯಿಂದ ಗುರುತು ಪತ್ತೆ ಹಚ್ಚಿ ಎಚ್ಚರಿಕೆ ನೀಡಿದ್ದರು. ಆದರೂ ಮತ್ತೆ ಮತ್ತೆ ಕರೆ ಮಾಡುತ್ತಿದ್ದ ಸೋನಿ ವಿರುದ್ಧ ಅಂತಿಮವಾಗಿ ಸೋಮವಾರ 294(ಅಶ್ಲೀಲ ಕಾಯ್ದೆ) ಮತ್ತು 506-II (ಅಪರಾಧ ಬೆದರಿಕೆ) ಸೇರಿದಂತೆ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com