ಸಂವಿಧಾನ ಉಳಿಸಲು 'ಮೋದಿ ಹತ್ಯೆ ಮಾಡಿ' ಎಂದು ಕರೆ ನೀಡಿದ್ದ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ ಬಂಧನ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಕೊಲ್ಲಲು ತಯಾರಾಗಿ ಎಂದು ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ರಾಜ ಪಟೇರಿಯಾ ಅವರನ್ನು ಪನ್ನಾ ಜಿಲ್ಲಾ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ರಾಜ ಪಟೇರಿಯಾ
ರಾಜ ಪಟೇರಿಯಾ

ಮಧ್ಯಪ್ರದೇಶ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಕೊಲ್ಲಲು ತಯಾರಾಗಿ ಎಂದು ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ರಾಜ ಪಟೇರಿಯಾ ಅವರನ್ನು ಪನ್ನಾ ಜಿಲ್ಲಾ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರನ್ನು ಕೊಲೆ ಮಾಡಿ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ ಅವರನ್ನು ಇಂದು ಬಂಧಿಸಲಾಗಿದೆ. ಸಂವಿಧಾನವನ್ನು ಉಳಿಸಬೇಕಾದರೆ ಪಿಎಂ ಮೋದಿಯನ್ನು ಕೊಲ್ಲಬೇಕು ಎಂದು ರಾಜಾ ಪಟೇರಿಯಾ ಅವರು ಜನರ ಗುಂಪನ್ನು ಪ್ರೇರೇಪಿಸುತ್ತಿರುವ ವೀಡಿಯೊ ವೈರಲ್ ಆಗಿತ್ತು.

ಪಟೇರಿಯಾ ಅವರ ಹೇಳಿಕೆಯ ವಿಡಿಯೋ ವೈರಲ್ ಆದ ಬಳಿಕ ಮಧ್ಯಪ್ರದೇಶ ಸರ್ಕಾರವು ಮಾಜಿ ರಾಜ್ಯ ಸಚಿವ ಪಟೇರಿಯಾ ವಿರುದ್ಧ ಪೊಲೀಸ್ ತನಿಖೆಗೆ ಆದೇಶಿಸಿದೆ. ಮೋದಿ ವಿರುದ್ಧ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಪನ್ನಾ ಜಿಲ್ಲೆಯ ಪವಾಯಿ ಪೊಲೀಸ್‌ ಠಾಣೆಯಲ್ಲಿ ಪಟೇರಿಯಾ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಸೋಮವಾರ ಮಧ್ಯಾಹ್ನ ಎಫ್‌ಐಆರ್‌ ದಾಖಲಾಗಿತ್ತು.

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಹೇಳಿಕೆಯನ್ನು ಖಂಡಿಸಿದ್ದಾರೆ. “ಭಾರತ್ ಜೋಡೋ ಯಾತ್ರೆ ಮಾಡುವವರ ನಿಜವಾದ ಮುಖ ಹೊರಬರುತ್ತಿದೆ” ಎಂದು ಟೀಕೆ ಮಾಡಿದ್ದಾರೆ.

ಪನ್ನಾ ಜಿಲ್ಲೆಯ ಪವಾಯಿ ಪಟ್ಟಣದಲ್ಲಿ ಭಾನುವಾರ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಪಟೇರಿಯಾ, ‘ಮೋದಿ ಚುನಾವಣೆ ಕೊನೆಗೊಳಿಸಲಿದ್ದಾರೆ. ಧರ್ಮ, ಜಾತಿ, ಭಾಷೆಯ ಆಧಾರದಲ್ಲಿ ವಿಭಜನೆ ಮಾಡುತ್ತಾರೆ. ದಲಿತರು, ಬುಡಕಟ್ಟು ಹಾಗೂ ಅಲ್ಪಸಂಖ್ಯಾತರ ಭವಿಷ್ಯ ಅಪಾಯದಲ್ಲಿದೆ. ಸಂವಿಧಾನ ಉಳಿಯಬೇಕಿದ್ದರೆ, ಮೋದಿ ಕೊಲ್ಲಲು ಸಜ್ಜಾಗಿ, ಅಂದರೆ ಅವರನ್ನು ಸೋಲಿಸಿ’ ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com