ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬಿಹಾರ: ನಕಲಿ ಮದ್ಯ ಸೇವನೆ, ಮೃತರ ಸಂಖ್ಯೆ 39ಕ್ಕೆ ಏರಿಕೆ

ಬಿಹಾರದ ಛಾಪ್ರಾದಲ್ಲಿ ನಕಲಿ ಮದ್ಯ ಸೇವಿಸಿ ಮೃತಪಟ್ಟಿರುವವರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ. ಈ ದುರಂತದ ಹಿನ್ನೆಲೆಯಲ್ಲಿ ಛಾಪ್ರಾ ಠಾಣಾಧಿಕಾರಿ ರಿತೇಶ್ ಮಿಶ್ರಾ ಮತ್ತು ಕಾನ್ಸ್ ಟೇಬಲ್ ವಿಕೇಶ್ ತಿವಾರಿಯನ್ನು ಕೂಡಲೇ ಜಾರಿಯಾಗುವಂತೆ ಸೇವೆಯಿಂದ ಅಮಾನತು ಮಾಡಲಾಗಿದೆ.  

ಪಾಟ್ನಾ: ಬಿಹಾರದ ಛಾಪ್ರಾದಲ್ಲಿ ನಕಲಿ ಮದ್ಯ ಸೇವಿಸಿ ಮೃತಪಟ್ಟಿರುವವರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ. ಈ ದುರಂತದ ಹಿನ್ನೆಲೆಯಲ್ಲಿ ಛಾಪ್ರಾ ಠಾಣಾಧಿಕಾರಿ ರಿತೇಶ್ ಮಿಶ್ರಾ ಮತ್ತು ಕಾನ್ಸ್ ಟೇಬಲ್ ವಿಕೇಶ್ ತಿವಾರಿಯನ್ನು ಕೂಡಲೇ ಜಾರಿಯಾಗುವಂತೆ ಸೇವೆಯಿಂದ ಅಮಾನತು ಮಾಡಲಾಗಿದೆ.  

ನಕಲಿ ಮದ್ಯ ಸೇವೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ 47 ಜನರ ಪೈಕಿ ಕೆಲವರಿಗೆ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ. ಅನೇಕ ಮಂದಿಯ ದೃಷ್ಟಿಗೆ ದೋಷವಾಗಿದೆ. ಅವರಿಗೆ ಚಿಕಿತ್ಸೆ ನಡೆಯುತ್ತಿದೆ. ಅಗತ್ಯ ಬಿದ್ದರೆ ಅವರನ್ನು ಸದರ್ ಜಿಲ್ಲಾ ಆಸ್ಪತ್ರೆಗೆ ಶಿಫಾರಸು ಮಾಡಲಾಗುವುದು ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ. ಸಂಜಯ್ ಕುಮಾರ್ ತಿಳಿಸಿದ್ದಾರೆ. 

ಈ ವಿಚಾರದಲ್ಲಿ ಪ್ರತಿಪಕ್ಷ ಬಿಜೆಪಿ, ಸಿಎಂ ನಿತೀಶ್‌ ಕುಮಾರ್‌ ಹಾಗೂ ಮಹಾಘಟಬಂದನ್‌ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸುತ್ತಿದೆ. ಬಿಜೆಪಿ ಆರೋಪಕ್ಕೆ ಉತ್ತರಿಸಿರುವ ನಿತೀಶ್‌ ಕುಮಾರ್‌, ಯಾರೆಲ್ಲಾ ನಕಲಿ ಮದ್ಯ ಸೇವಿಸ್ತಾರೋ ಅವರೆಲ್ಲಾ ಸಾಯೋದು ಖಂಡಿತ. ಖುದ್ದು ಜನರೇ ಈ ವಿಚಾರದಲ್ಲಿ ಎಚ್ಚರಿಕೆ ವಹಿಸಬೇಕು. ಕೆಲವೊಂದು ವ್ಯಕ್ತಿಗಳು ದುಡ್ಡಿಗಾಗಿ ಈ ಕೆಲಸ ಮಾಡ್ತಾರೆ. ಕೆಲವು ವ್ಯಕ್ತಿಗಳು ನಕಲಿ ಮದ್ಯ ಸೇವಿಸುವ ತಪ್ಪು ಮಾಡ್ತಾರೆ. ಇಂಥವನ್ನೆಲ್ಲಾ ಸೇವಿಸುವ ವ್ಯಕ್ತಿಗಳು ಖಂಡಿತವಾಗಿ ಸಾಯುತ್ತಾರೆ ಎಂದು ಹೇಳಿದ್ದಾರೆ.

ಈ ಸಾವಿಗೆ ಕಾರಣರಾದವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಎಫ್ ಐಆರ್ ದಾಖಲು ಪ್ರಕ್ರಿಯೆ ನಡೆಯುತ್ತಿದೆ  ಎಂದು ಬಿಹಾರ ಅಬಕಾರಿ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.  ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರ  2016 ಏಪ್ರಿಲ್ ನಲ್ಲಿ ಮದ್ಯ ಮಾರಾಟ ಮತ್ತು ಸೇವೆನೆಯನ್ನು ನಿರ್ಬಂಧಿಸಿತ್ತು.

Related Stories

No stories found.

Advertisement

X
Kannada Prabha
www.kannadaprabha.com