ಛತ್ತೀಸ್‌ಗಢ: 8 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಹತ್ಯೆಗೈದ ಅಪ್ರಾಪ್ತನ ಬಂಧನ
ಛತ್ತೀಸ್‌ಗಢದ ರಾಯ್‌ಪುರದಲ್ಲಿ 8 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಕೊಲೆ ಮಾಡಿದ ಆರೋಪದ ಮೇಲೆ ಹದಿಹರೆಯದ ಹುಡುಗನನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
Published: 15th December 2022 08:38 PM | Last Updated: 15th December 2022 08:38 PM | A+A A-

ಸಾಂದರ್ಭಿಕ ಚಿತ್ರ
ರಾಯ್‌ಪುರ: ಛತ್ತೀಸ್‌ಗಢದ ರಾಯ್‌ಪುರದಲ್ಲಿ 8 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಕೊಲೆ ಮಾಡಿದ ಆರೋಪದ ಮೇಲೆ ಹದಿಹರೆಯದ ಹುಡುಗನನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ಡಿಸೆಂಬರ್ 7 ರಂದು ಬಾಲಕಿ ನಾಪತ್ತೆಯಾಗಿದ್ದಳು, ನಂತರ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿತ್ತು ಎಂದು ಅವರು ಹೇಳಿದ್ದಾರೆ.
ಇದನ್ನು ಓದಿ: ಉತ್ತರ ಪ್ರದೇಶ: ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆ, ಅತ್ಯಾಚಾರದ ಶಂಕೆ
ಬಳಿಕ ಡಿಸೆಂಬರ್ 13 ರಂದು ಸದ್ದು ಪ್ರದೇಶದ ಖಾಲಿ ಜಾಗದಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಬಾಲಕಿಯನ್ನು ಕತ್ತು ಹಿಸುಕಿ ಹತ್ಯೆ ಮಾಡಲಾಗಿದೆ ಮತ್ತು ಕೊಲ್ಲುವ ಮೊದಲು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಮರಣೋತ್ತರ ಪರೀಕ್ಷಾ ವರದಿ ತಿಳಿಸಿದೆ ಎಂದು ರಾಯ್‌ಪುರದ ಹಿರಿಯ ಪೊಲೀಸ್ ಅಧೀಕ್ಷಕ ಪ್ರಶಾಂತ್ ಅಗರವಾಲ್ ಹೇಳಿದ್ದಾರೆ.
"ಹುಡುಗಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಕೊಂದ ಆರೋಪದ ಮೇಲೆ ನಾವು 14 ವರ್ಷದ ಬಾಲಕನನ್ನು ಬಂಧಿಸಿದ್ದೇವೆ. ಸ್ಥಳದಲ್ಲಿನ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಬಾಲಕನನ್ನು ವಶಕ್ಕೆ ಪಡೆದಿದ್ದೇವೆ. ವಿಚಾರಣೆಯ ಸಮಯದಲ್ಲಿ ಆರೋಪಿ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ" ಎಂದು ಎಸ್ಎಸ್ಪಿ ತಿಳಿಸಿದ್ದಾರೆ.
ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ 302 (ಕೊಲೆ), 363 (ಅಪಹರಣ), 376 (ಅತ್ಯಾಚಾರ) ಮತ್ತು 201 (ಸಾಕ್ಷ್ಯ ನಾಶ) ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಅಡಿ ಕೇಸ್ ದಾಖಲಿಸಲಾಗಿದೆ.