ಹುಲಿ ದಾಳಿಗೆ ಮಹಿಳೆ ಬಲಿ: ಈ ಜಿಲ್ಲೆಯೊಂದರಲ್ಲೇ ಒಂದು ವರ್ಷದಲ್ಲಿ ವ್ಯಾಘ್ರನ ಅಟ್ಟಹಾಸಕ್ಕೆ 50 ಬಲಿ

ಚಂದ್ರಾಪುರ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನ 50 ವರ್ಷದ ಮಹಿಳೆಯೊಬ್ಬರನ್ನು ಹುಲಿ ಬಲಿಪಡೆದುಕೊಂಡಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಚಂದ್ರಾಪುರ(ಮಹಾರಾಷ್ಟ್ರ): ಚಂದ್ರಾಪುರ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನ 50 ವರ್ಷದ ಮಹಿಳೆಯೊಬ್ಬರನ್ನು ಹುಲಿ ಬಲಿಪಡೆದುಕೊಂಡಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಇಲ್ಲಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಸಾವೊಲಿ ವ್ಯಾಪ್ತಿಯ ಖಾದಿ ಗ್ರಾಮದ ಬಳಿಯ ಜಮೀನಿನಲ್ಲಿ ಹತ್ತಿ ಉಳುಮೆ ಮಾಡುತ್ತಿದ್ದಾಗ ಸ್ವರೂಪಾ ಟೆಲಿಟಿವಾರ್ ಮೇಲೆ ಹುಲಿ ದಾಳಿ ಮಾಡಿದ್ದು ಗಂಭೀರವಾಗಿ ಗಾಯಗೊಂಡಿದ್ದ ಆಕೆ ಮೃತಪಟ್ಟಿದ್ದಾಳೆ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಲೋಂಕರ್ ಹೇಳಿದ್ದಾರೆ. 

ಜಿಲ್ಲೆಯಲ್ಲಿ ಈ ವರ್ಷ ಒಟ್ಟು 50 ಮಂದಿ ಹುಲಿ ದಾಳಿಗೆ ಬಲಿಯಾಗಿದ್ದಾರೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ. ಹುಲಿಗಳಿಂದ 44 ದಾಳಿಗಳು ಮತ್ತು ಚಿರತೆಗಳಿಂದ ಆರು ದಾಳಿಗಳು ನಡೆದಿವೆ ಎಂದು ಅವರು ಹೇಳಿದರು.

ಚಂದ್ರಾಪುರದ ಉಸ್ತುವಾರಿ ಸಚಿವರಾಗಿರುವ ಮಹಾರಾಷ್ಟ್ರದ ಅರಣ್ಯ ಸಚಿವ ಸುಧೀರ್ ಮುಂಗಂಟಿವಾರ್ ಅವರು ಚಂದ್ರಾಪುರದಲ್ಲಿ ಹುಲಿ-ಮಾನವ ಸಂಘರ್ಷ ತಡೆಯಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ತಮ್ಮ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ಜಿಲ್ಲಾ ಮಾಹಿತಿ ಕಛೇರಿಯ ಪ್ರಕಾರ, ಡಿಸೆಂಬರ್ 14ರಂದು ಮುಲ್ ಮತ್ತು ಸಾವೋಲಿ ತಹಸಿಲ್‌ಗಳಲ್ಲಿ ಪ್ರತ್ಯೇಕ ಹುಲಿ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದರೆ. ಡಿಸೆಂಬರ್ 15ರಂದು ಖೇಡಿಯಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ. ಹುಲಿ-ಮಾನವ ಸಂಘರ್ಷ ತಡೆಯಲು ವಿಫಲವಾದರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com