ಉತ್ತರ ಪ್ರದೇಶ: ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆ, ಅತ್ಯಾಚಾರದ ಶಂಕೆ
ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿರುವ ಉತ್ತರ ಪ್ರದೇಶದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ವರದಿಯಾಗಿದೆ. ನಾಪತ್ತೆಯಾಗಿದ್ದ 8 ವರ್ಷದ ಬಾಲಕಿ ಗುರುವಾರ ಭದೋಹಿ ಗ್ರಾಮದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.
Published: 15th December 2022 05:08 PM | Last Updated: 15th December 2022 05:08 PM | A+A A-

ಸಾಂದರ್ಭಿಕ ಚಿತ್ರ
ಲಖನೌ: ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿರುವ ಉತ್ತರ ಪ್ರದೇಶದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ವರದಿಯಾಗಿದೆ. ನಾಪತ್ತೆಯಾಗಿದ್ದ 8 ವರ್ಷದ ಬಾಲಕಿ ಗುರುವಾರ ಭದೋಹಿ ಗ್ರಾಮದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.
ಆಕೆಯ ಖಾಸಗಿ ಅಂಗಗಳ ಮೇಲೆ ಗಾಯದ ಗುರುತು ಆಗಿದ್ದು, ಆಕೆಯ ಮೇಲೆ ಅತ್ಯಾಚಾರವಾಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ನೆರೆ ಮನೆಯವರ ವಿವಾಹ ಕಾರ್ಯಕ್ರಮಕ್ಕೆ ಹೋಗಿದ್ದ ಬಾಲಕಿ ನಿನ್ನೆ ಸಂಜೆಯಿಂದ ನಾಪತ್ತೆಯಾಗಿದ್ದಳು.
ಚೌರಿ ಪೊಲೀಸ್ ಠಾಣೆ ವ್ಯಾಪ್ತಿಯ ಆಕೆಯ ಮನೆಯಿಂದ ಸ್ವಲ್ಪ ದೂರದಲ್ಲಿ ರಕ್ತದ ಮಡುವಿನಲ್ಲಿ ಬಿದಿದ್ದ ಬಾಲಕಿಯ ಮೃತದೇಹವನ್ನು ಗುರುವಾರ ವಶಕ್ಕೆ ಪಡೆಯಲಾಗಿದೆ. ಬಾಲಕಿ ಹತ್ಯೆಗೂ ಮುನ್ನ ಆಕೆಯ ಮೇಲೆ ಅತ್ಯಾಚಾರವಾಗಿರುವುದು ಮೇಲ್ನೋಟಕ್ಕೆ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.