ಜಮ್ಮು-ಕಾಶ್ಮೀರ: ರಜೌರಿ ಸೇನಾ ಆಸ್ಪತ್ರೆ ಬಳಿ ಉಗ್ರರಿಂದ ಗುಂಡಿನ ದಾಳಿ, ಇಬ್ಬರ ಸಾವು

ಜಮ್ಮು ಮತ್ತು ಕಾಶ್ಮೀರದ ರಜೌರಿಯ ಸೇನಾ ಆಸ್ಪತ್ರೆಯಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ರಜೌರಿ: ಜಮ್ಮು ಮತ್ತು ಕಾಶ್ಮೀರದ ರಜೌರಿಯ ಸೇನಾ ಆಸ್ಪತ್ರೆಯಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.

ಸೇನಾ ಆಸ್ಪತ್ರೆ ಬಳಿ ಇದ್ದಕ್ಕಿದ್ದಂತೆ ಬಂದ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿ, ಸ್ಥಳದಿಂದ ಪರಾರಿಯಾಗಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು, ಭದ್ರತಾ ಪಡೆಗಳು ಹಾಗೂ ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಈ ಸಂಬಂಧ ಅಧಿಕಾರಿಗಳು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, ರಾಜೌರಿಯಲ್ಲಿ ಸೇನಾ ಆಸ್ಪತ್ರೆ ಬಳಿ ಇಂದು ಮುಂಜಾನೆ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ಪೊಲೀಸರು, ಭದ್ರತಾ ಪಡೆಗಳು ಮತ್ತು ನಾಗರಿಕ ಆಡಳಿತ ಅಧಿಕಾರಿಗಳು ಸ್ಥಳದಲ್ಲಿದ್ದಾರೆಂದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com