ವಿಜಯವಾಡ: ಕೃಷ್ಣಾನದಿಯಲ್ಲಿ ದುರಂತ; ಈಜಲು ಹೋಗಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲು, ಇಬ್ಬರ ಶವ ಪತ್ತೆ!

ಆಂಧ್ರ ಪ್ರದೇಶದ ಕೃಷ್ಣಾ ನದಿಯಲ್ಲಿ ಈಜಲು ಹೋಗಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾಗಿ ಇಬ್ಬರ ಶವ ಪತ್ತೆಯಾಗಿರುವ ಘಟನೆ ಶುಕ್ರವಾರ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ವಿಜಯವಾಡ: ಆಂಧ್ರ ಪ್ರದೇಶದ ಕೃಷ್ಣಾ ನದಿಯಲ್ಲಿ ಈಜಲು ಹೋಗಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾಗಿ ಇಬ್ಬರ ಶವ ಪತ್ತೆಯಾಗಿರುವ ಘಟನೆ ಶುಕ್ರವಾರ ನಡೆದಿದೆ.

ವಿಜಯವಾಡ ಜಿಲ್ಲೆಯ ಯನಮಲಕುಡರು ಬಳಿಯ ಕೃಷ್ಣಾ ನದಿಯಲ್ಲಿ ಏಳು ವಿದ್ಯಾರ್ಥಿಗಳು ಈಜಲು ಹೋಗಿದ್ದರು. ಈ ಪೈಕಿ ಐದು ವಿದ್ಯಾರ್ಥಿಗಳು ನೀರು ಪಾಲಾಗಿದ್ದು, ಇಬ್ಬರನ್ನು ರಕ್ಷಿ,ಸಲಾಗಿದೆ. ಅಂತೆಯೇ ಇಬ್ಬರ ಶವ ಪತ್ತೆಯಾಗಿದ್ದು  ನಾಪತ್ತೆಯಾಗಿರುವ ಮೂರು ವಿದ್ಯಾರ್ಥಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ನಾಪತ್ತೆಯಾಗಿರುವ ವಿದ್ಯಾರ್ಥಿಗಳಿಗಾಗಿ ಹುಡುಕಾಟ ನಡೆಸುತ್ತಿವೆ.

ಈಜಲು ತೆರಳಿದ್ದ ವಿದ್ಯಾರ್ಥಿಗಳೆಲ್ಲರೂ 12 ಮತ್ತು 13 ವರ್ಷ ವಯಸ್ಸಿನವರಾಗಿದ್ದು, ಎಲ್ಲರೂ 7ನೇ ತರಗತಿ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಸಂಕ್ರಾಂತಿ ರಜೆ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ತಮ್ಮ ಮನೆಗಳಿಗೆ ಬಂದಿದ್ದರು. ವಿದ್ಯಾರ್ಥಿಗಳು ಕೃಷ್ಣಾ ಜಿಲ್ಲೆಯ ಏತೂರು ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ.

ನಂದಿಗಾಮ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಜಿ ನಾಗೇಶ್ವರ ರೆಡ್ಡಿ ಈ ಬಗ್ಗೆ ಮಾತನಾಡಿ, ವಿದ್ಯಾರ್ಥಿಗಳು ನದಿಗೆ ಈಜಲು ಹೋಗಿದ್ದರು. ನಾಪತ್ತೆಯಾಗಿರುವ ವಿದ್ಯಾರ್ಥಿಗಳನ್ನು ಅಜಯ್ (12), ಚರಣ್ (13), ಬಾಲಯೇಸು (12), ರಾಕೇಶ್ (12) ಮತ್ತು ಸನ್ನಿ (12) ಎಂದು ಗುರುತಿಸಲಾಗಿದೆ. ನಾಪತ್ತೆಯಾದ ವಿದ್ಯಾರ್ಥಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಹುಡುಕಾಟ ನಡೆಸುತ್ತಿವೆ. ಭಾರತೀಯ ನೌಕಾಪಡೆ ಮತ್ತು ಕೋಸ್ಟ್ ಗಾರ್ಡ್ ಎರಡು ಹೆಲಿಕಾಪ್ಟರ್‌ಗಳು ಮತ್ತು ನಾಲ್ಕು ದೋಣಿಗಳನ್ನು ಒಳಗೊಂಡ ಶೋಧ ಕಾರ್ಯಾಚರಣೆಯ ನಂತರ ಬಂಗಾಳಕೊಲ್ಲಿಯ ಪುಡಿಮಾಡಕ ದಡದಲ್ಲಿ ಮೃತದೇಹಗಳನ್ನು ಪತ್ತೆ ಮಾಡಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com