ಸುಪ್ರೀಂ ಕೋರ್ಟ್‌ನಿಂದ ನ್ಯಾಯ ಸಿಗದಿದ್ದರೆ ಜನರು ಎಲ್ಲಿಗೆ ಹೋಗಬೇಕು: ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ
ನವದೆಹಲಿ: ಸುಪ್ರೀಂ ಕೋರ್ಟ್‌ನಿಂದ ಜನರಿಗೆ ನ್ಯಾಯ ಸಿಗದಿದ್ದಾಗ ಅವರು ಎಲ್ಲಿಗೆ ಹೋಗಬೇಕು ಎಂದು ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಬಿಲ್ಕಿಸ್ ಬಾನು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ನಂತರ ಶನಿವಾರ ಪ್ರಶ್ನಿಸಿದ್ದಾರೆ.
2002ರ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್ ಬಾನು ಅವರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದ್ದು ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಕೊಲೆ ಮಾಡಲಾಯಿತು.
ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳ ಶಿಕ್ಷೆಯನ್ನು ಕಡಿತಗೊಳಿಸುವಂತೆ ಅರ್ಜಿಗಳನ್ನು ಪರಿಗಣಿಸುವಂತೆ ಗುಜರಾತ್ ಸರ್ಕಾರವನ್ನು ಕೇಳಿದ್ದ ತನ್ನ ಹಿಂದಿನ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಬಿಲ್ಕಿಸ್ ಬಾನು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
'ಬಿಲ್ಕಿಸ್ ಬಾನು ಅವರ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಬಿಲ್ಕಿಸ್ ಬಾನು ಅವರು 21 ವರ್ಷದವರಿದ್ದಾಗ ಸಾಮೂಹಿಕ ಅತ್ಯಾಚಾರಕ್ಕೊಳಗಾದರು ಮತ್ತು ಅವರ ಮೂರು ವರ್ಷದ ಮಗ ಸೇರಿದಂತೆ ಆರು ಕುಟುಂಬ ಸದಸ್ಯರನ್ನು ಹತ್ಯೆ ಮಾಡಲಾಯಿತು. ಆದರೆ, ಗುಜರಾತ್ ಸರ್ಕಾರವು ಎಲ್ಲಾ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಿತು. ಸುಪ್ರೀಂ ಕೋರ್ಟ್‌ನಿಂದ ನ್ಯಾಯ ಸಿಗದಿದ್ದರೆ ಜನರು ಎಲ್ಲಿಗೆ ಹೋಗುತ್ತಾರೆ' ಎಂದು ಮಲಿವಾಲ್ ಟ್ವಿಟರ್‌ನಲ್ಲಿ ಪ್ರಶ್ನಿಸಿದ್ದಾರೆ.
ಸರ್ವೋಚ್ಚ ನ್ಯಾಯಾಲಯದ ತೀರ್ಪುಗಳ ವಿರುದ್ಧದ ಮರುಪರಿಶೀಲನಾ ಅರ್ಜಿಗಳನ್ನು ತೀರ್ಪಿನ ಭಾಗವಾಗಿರುವ ನ್ಯಾಯಾಧೀಶರು ಪರಿಶೀಲಿಸುವ ಮೂಲಕ ಕೋಣೆಗಳಲ್ಲಿ ನಿರ್ಧರಿಸುತ್ತಾರೆ.
ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ವಿಕ್ರಮ್ ನಾಥ್ ಅವರ ಪೀಠದ ಮುಂದೆ ಡಿಸೆಂಬರ್ 13 ರಂದು ಬಿಲ್ಕಿಸ್ ಬಾನು ಅವರ ಮರುಪರಿಶೀಲನಾ ಅರ್ಜಿಯು ಇನ್ ಚೇಂಬರ್ ಪರಿಗಣನೆಗೆ ಬಂದಿತು.
'ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾದ ಮರುಪರಿಶೀಲನಾ ಅರ್ಜಿಯನ್ನು ಡಿಸೆಂಬರ್ 13 ರಂದು ನ್ಯಾಯಾಲಯವು ವಜಾಗೊಳಿಸಿದೆ ಎಂದು ನಿಮಗೆ ತಿಳಿಸಲು ನನಗೆ ಸೂಚಿಸಲಾಗಿದೆ' ಎಂದು ಸುಪ್ರೀಂ ಕೋರ್ಟ್‌ನ ಸಹಾಯಕ ರಿಜಿಸ್ಟ್ರಾರ್ ಅವರು ಬಿಲ್ಕಿಸ್ ಬಾನು ಅವರ ಪರ ವಕೀಲೆ ಶೋಭಾ ಗುಪ್ತಾ ಅವರಿಗೆ ಕಳುಹಿಸಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಅತ್ಯಾಚಾರ ಪ್ರಕರಣದ ದೋಷಿಯೊಬ್ಬ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ 2022ರ ಮೇ 13ರಂದು ಸುಪ್ರೀಂಕೋರ್ಟ್ ನೀಡಿದ್ದ ತೀರ್ಪು ಪುನರ್‌ಪರಿಶೀಲನೆ ನಡೆಸುವಂತೆ ಕೋರಿ ಬಿಲ್ಕಿಸ್ ಬಾನೊ ಅವರು ಪ್ರತ್ಯೇಕ ಅರ್ಜಿಯೊಂದನ್ನೂ ಸಲ್ಲಿಸಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ