ಉತ್ತರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಎರಡು ಬಸ್'ಗಳ ಮುಖಾಮುಖಿ ಡಿಕ್ಕಿ, ಮೂವರ ಸಾವು, 20 ಮಂದಿಗೆ ಗಾಯ
ನೋಯ್ಡಾದ ನಾಲೆಡ್ಜ್ ಪಾರ್ಕ್ ಬಳಿಯ ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸ್‌ವೇಯಲ್ಲಿ ಎರಡು ಬಸ್‌ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.
Published: 18th December 2022 10:12 AM | Last Updated: 18th December 2022 01:04 PM | A+A A-

ಸಂಗ್ರಹ ಚಿತ್ರ
ಗ್ರೇಟರ್ ನೊಯ್ಡಾ: ನೋಯ್ಡಾದ ನಾಲೆಡ್ಜ್ ಪಾರ್ಕ್ ಬಳಿಯ ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸ್‌ವೇಯಲ್ಲಿ ಎರಡು ಬಸ್‌ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.
ಇದನ್ನೂ ಓದಿ: ತುಮಕೂರಿನಲ್ಲಿ ಕ್ಯಾಂಟರ್-ಕಾರು ನಡುವೆ ಭೀಕರ ಅಪಘಾತ: ನಾಲ್ವರ ದುರ್ಮರಣ!
ಅಪಘಾತ ಸಂಬಂಧ ಗ್ರೇಟರ್ ನೋಯ್ಡಾ ಪೊಲೀಸರು ಮಾಹಿತಿ ನೀಡಿದ್ದು, ನೋಯ್ಡಾದ ನಾಲೆಡ್ಜ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸ್‌ವೇಯಲ್ಲಿ ಎರಡು ಬಸ್‌ಗಳು ಡಿಕ್ಕಿ ಸಂಭವಿಸಿದ್ದು, ಮೂವರು ಸಾವನ್ನಪ್ಪಿ ಹಲವರಿಗೆ ಗಾಯಗಳಾಗಿವೆ ಎಂದು ಹೇಳಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಇದೀಗ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ರವಾನಿಸಿದ್ದು, ಸ್ಥಳದಲ್ಲಿ ಪರಿಶೀಲನೆ ಆರಂಭಿಸಿದ್ದಾರೆ.