ವಿಚ್ಛೇಧನ ಪಡೆಯಲು ಗರ್ಭಿಣಿ ಪತ್ನಿಗೆ ಹೆಚ್‌ಐವಿ ಸೋಂಕಿತ ರಕ್ತವನ್ನು ಚುಚ್ಚಿದ ಆಂಧ್ರಪ್ರದೇಶದ ವ್ಯಕ್ತಿ

ಆಂಧ್ರಪ್ರದೇಶದಲ್ಲಿ ಒಬ್ಬ ವ್ಯಕ್ತಿ ತನ್ನ ಗರ್ಭಿಣಿ ಪತ್ನಿಗೆ ವಿಚ್ಛೇದನ ನೀಡಲು ಕಾರಣವನ್ನು ಹುಡುಕಲು ಹೆಚ್‌ಐವಿ ಸೋಂಕಿತ ರಕ್ತವನ್ನು ಚುಚ್ಚುಮದ್ದು ನೀಡಿದ್ದಾನೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಅಮರಾವತಿ: ಆಂಧ್ರಪ್ರದೇಶದಲ್ಲಿ ಒಬ್ಬ ವ್ಯಕ್ತಿ ತನ್ನ ಗರ್ಭಿಣಿ ಪತ್ನಿಗೆ ವಿಚ್ಛೇದನ ನೀಡಲು ಕಾರಣವನ್ನು ಹುಡುಕಲು ಹೆಚ್‌ಐವಿ ಸೋಂಕಿತ ರಕ್ತವನ್ನು ಚುಚ್ಚುಮದ್ದು ನೀಡಿದ್ದಾನೆ.

ವೈದ್ಯಕೀಯ ಕೌಶಲ್ಯವುಳ್ಳವರ ಸಹಾಯದಿಂದ ಹೆಚ್‌ಐವಿ ಸೋಂಕಿತ ರಕ್ತವನ್ನು ಚುಚ್ಚುಮದ್ದು ಮಾಡಿದ್ದಾನೆ ಎಂದು ಪತ್ನಿ ನೀಡಿದ ದೂರಿನ ಮೇರೆಗೆ ತಾಡೆಪಲ್ಲಿ ಪೊಲೀಸರು ಎಂ.ಚರಣ್‌ ಎಂಬಾತನನ್ನು ಬಂಧಿಸಿದ್ದಾರೆ.

ಚರಣ್ ವಿಚ್ಛೇದನ ನೀಡಲು ಸಮಂಜಸವಾದ ಕಾರಣವನ್ನು ಹುಡುಕುತ್ತಿದ್ದನು ಮತ್ತು ಯೋಜನೆಯ ಪ್ರಕಾರ, ಆತ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಗರ್ಭಾವಸ್ಥೆಯಲ್ಲಿ ಉತ್ತಮ ಆರೋಗ್ಯವನ್ನು ಖಚಿತಪಡಿಸಿಕೊಳ್ಳಲು ನೀಡುವ ಚುಚ್ಚುಮದ್ದು ಎಂದು ಆಕೆಗೆ ತಿಳಿಸಲಾಯಿತು ಎಂದು ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಿದಾಗ ತಾನು ಹೆಚ್‌ಐವಿ ಪಾಸಿಟಿವ್ ಎಂದು ತಿಳಿದು ಆಘಾತಕ್ಕೊಳಗಾಗಿದ್ದೇನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪತಿ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದು, ಗಂಡು ಮಗುವನ್ನು ಹೆರುವಂತೆ ಒತ್ತಾಯಿಸುತ್ತಿದ್ದ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ದಂಪತಿಗೆ ಒಬ್ಬ ಮಗಳಿದ್ದಾಳೆ.

ಆರೋಪಿ ಚರಣ್‌ನನ್ನು ವಿಚಾರಣೆ ನಡೆಸುತ್ತಿದ್ದು, ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com