ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈಶಾನ್ಯ ರಾಜ್ಯಗಳಲ್ಲಿ ಶಾಂತಿ ಸ್ಥಾಪಿಸಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ

ಒಂದು ಕಾಲದಲ್ಲಿ ಉಗ್ರಗಾಮಿ ಪೀಡಿತ ಪ್ರದೇಶವಾಗಿದ್ದ ಈಶಾನ್ಯ ಭಾಗದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಶಾಂತಿ ಸ್ಥಾಪಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ.
ಅಮಿತ್ ಶಾ
ಅಮಿತ್ ಶಾ

ಶಿಲ್ಲಾಂಗ್: ಒಂದು ಕಾಲದಲ್ಲಿ ಉಗ್ರಗಾಮಿ ಪೀಡಿತ ಪ್ರದೇಶವಾಗಿದ್ದ ಈಶಾನ್ಯ ಭಾಗದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಶಾಂತಿ ಸ್ಥಾಪಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ.

ಪ್ರಧಾನಿ ಸಮ್ಮುಖದಲ್ಲಿ ಇಲ್ಲಿ ಈಶಾನ್ಯ ಕೌನ್ಸಿಲ್ (ಎನ್‌ಇಸಿ) ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾ, ಮೋದಿ ಕಳೆದ ಎಂಟು ವರ್ಷಗಳಲ್ಲಿ 50 ಕ್ಕೂ ಹೆಚ್ಚು ಬಾರಿ ಈ ಪ್ರದೇಶಕ್ಕೆ ಭೇಟಿ ನೀಡಿದರು ಮತ್ತು ಈ ಪ್ರದೇಶದ ಪ್ರಗತಿಗೆ ಮಾರ್ಗಸೂಚಿಯನ್ನು ಹಾಕಿದರು ಎಂದರು.

ಈಶಾನ್ಯದ ರಾಜ್ಯಗಳು ಹಿಂಸಾಚಾರ ಮತ್ತು ಪ್ರತ್ಯೇಕತಾವಾದಕ್ಕೆ ಹೆಸರುವಾಸಿಯಾಗಿದೆ. ಆದರೆ, ಕಳೆದ ಎಂಟು ವರ್ಷಗಳಲ್ಲಿ, ಬಂಡಾಯದ ಘಟನೆಗಳು ಶೇಕಡಾ 70 ರಷ್ಟು ಕಡಿಮೆಯಾಗಿದೆ. ಭದ್ರತಾ ಸಿಬ್ಬಂದಿ ಮೇಲಿನ ದಾಳಿಗಳು ಸಹ 60 ಪ್ರತಿಶತದಷ್ಟು ಕಡಿಮೆಯಾಗಿದೆ ಮತ್ತು ನಾಗರಿಕ ಸಾವುನೋವುಗಳು ಶೇ 89ಕ್ಕೆ ಇಳಿದಿವೆ ಎಂದು ಅವರು ಹೇಳಿದರು.

ಅರುಣಾಚಲ ಪ್ರದೇಶ, ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ ಮತ್ತು ತ್ರಿಪುರ ಸೇರಿ ಎಂಟು ರಾಜ್ಯಗಳನ್ನು ಒಳಗೊಂಡಿರುವ ಈಶಾನ್ಯ ಪ್ರದೇಶದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಎಇಸಿ ನೋಡಲ್ ಏಜೆನ್ಸಿಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com