ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ನಟ ಕಮಲ್ ಹಾಸನ್
ಚೆನ್ನೈ: ತಮಿಳುನಾಡಿನ ಮಕ್ಕಳ ನಿಧಿ ಮಯಂ (ಎಂಎನ್‌ಎಂ) ಪಕ್ಷದ ಸಂಸ್ಥಾಪಕ ಹಾಗೂ ನಟ ಕಮಲ್ ಹಾಸನ್ ಅವರು ದೆಹಲಿಯಲ್ಲಿ ಡಿಸೆಂಬರ್ 24 ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುವುದಾಗಿ ಭಾನುವಾರ ಹೇಳಿದ್ದಾರೆ.
ಇಲ್ಲಿ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಕಮಲ್ ಹಾಸನ್, ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುವಂತೆ ರಾಹುಲ್ ಗಾಂಧಿಯವರು ತಮ್ಮನ್ನು ಆಹ್ವಾನಿಸಿದ್ದಾರೆ ಎಂದು ಹೇಳಿದ್ದಾಗಿ ಪಕ್ಷದ ಮೂಲಗಳು ತಿಳಿಸಿವೆ.
ರಾಷ್ಟ್ರ ರಾಜಧಾನಿಯಲ್ಲಿ ರಾಹುಲ್ ಗಾಂಧಿ ನೇತೃತ್ವದ ಪಾದಯಾತ್ರೆಯಲ್ಲಿ ಪಕ್ಷದ ಕಾರ್ಯಕರ್ತರು ತಮ್ಮ ನಾಯಕ ಹಾಸನ್ ನೇತೃತ್ವದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಎಂಎನ್‌ಎಂ ವಕ್ತಾರ ಮುರಳಿ ಅಪ್ಪಾಸ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ನಮ್ಮ ನಾಯಕರು ಪದಾಧಿಕಾರಿಗಳನ್ನು ಉದ್ದೇಶಿಸಿ ಘೋಷಣೆ ಮಾಡಿದರು ಎಂದು ಅವರು ಹೇಳಿದರು.
ಕಮಲ್ ಹಾಸನ್ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ಇಲ್ಲಿ ಎಂಎನ್‌ಎಂ ಆಡಳಿತ ಮತ್ತು ಕಾರ್ಯಕಾರಿ ಸಮಿತಿ ಹಾಗೂ ಜಿಲ್ಲಾ ಕಾರ್ಯದರ್ಶಿಗಳ ಸಭೆ ನಡೆಯಿತು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ