"ನಾವು ನಮ್ಮ ಪ್ರಧಾನಿ ಬೆಂಬಲಕ್ಕೆ ನಿಲ್ಲುತ್ತೇವೆ": ಬಿಲಾವಲ್ ಭುಟ್ಟೋ ಹೇಳಿಕೆ ಖಂಡಿಸಿದ ಭೂಪೇಶ್ ಬಘೇಲ್

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಅವರ ಹೇಳಿಕೆಯನ್ನು ಖಂಡಿಸಿರುವ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು, "ನಾವೆಲ್ಲರೂ ನಮ್ಮ ಪ್ರಧಾನಿಯ ಬೆಂಬಲಕ್ಕೆ...
ಭೂಪೇಶ್ ಬಘೇಲ್
ಭೂಪೇಶ್ ಬಘೇಲ್

ರಾಯಪುರ್: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಅವರ ಹೇಳಿಕೆಯನ್ನು ಖಂಡಿಸಿರುವ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು, "ನಾವೆಲ್ಲರೂ ನಮ್ಮ ಪ್ರಧಾನಿಯ ಬೆಂಬಲಕ್ಕೆ ನಿಲ್ಲುತ್ತೇವೆ" ಎಂದು ಹೇಳಿದ್ದಾರೆ.

ಪಾಕಿಸ್ತಾನ ಸಚಿವರ ಹೇಳಿಕೆಗೆ ಭಾರತ ತಕ್ಕ ಪ್ರತ್ಯುತ್ತರ ನೀಡಬೇಕು ಎಂದು ಬಘೇಲ್ ಒತ್ತಾಯಿಸಿದ್ದಾರೆ.

"ಬಿಲಾವಲ್ ಭುಟ್ಟೊ ಒಬ್ಬ ಚಿಕ್ಕ ಹುಡುಗ, ಪ್ರಧಾನಿ ಮೋದಿ ವಿರುದ್ಧದ ಅವರ ಹೇಳಿಕೆಯನ್ನು ನಾನು ಖಂಡಿಸುತ್ತೇನೆ, ನಮ್ಮ ಪ್ರಧಾನಿ ಬಗ್ಗೆ ಈ ರೀತಿ ಮಾತನಾಡುವುದನ್ನು ಸಹಿಸುವುದಿಲ್ಲ. ಇದಕ್ಕೆ ಭಾರತ ತಕ್ಕ ಉತ್ತರ ನೀಡಬೇಕು. ಬೇರೆ ಯಾವುದೋ ದೇಶದ ನಾಯಕರು ನಮ್ಮ ಬಗ್ಗೆ ಹೇಗೆ ಮಾತನಾಡುತ್ತಾರೆ. ಇದಕ್ಕೆ ರಾಜಕೀಯ ಅಥವಾ ರಾಜತಾಂತ್ರಿಕವಾಗಿ ಉತ್ತರಿಸಬೇಕು. ನಾವೆಲ್ಲರೂ ನಮ್ಮ ಪ್ರಧಾನಿಯೊಂದಿಗೆ ನಿಲ್ಲುತ್ತೇವೆ, ” ಎಂದು ಕಾಂಗ್ರೆಸ್ ನಾಯಕ  ಹೇಳಿದ್ದಾರೆ.

"ನಾವು ನಮ್ಮ ರಾಜಕೀಯ ಸಿದ್ಧಾಂತವನ್ನು ಹೊಂದಿದ್ದೇವೆ, ಅದಕ್ಕೆ ನಾವು ಬದ್ಧರಾಗಿದ್ದೇವೆ. ಆದರೆ ರಾಷ್ಟ್ರದ ವಿಷಯಕ್ಕೆ ಬಂದಾಗ, ದೇಶದ ಪ್ರಧಾನಿ ನಮ್ಮೆಲ್ಲರ ಪ್ರಧಾನಿಯಾಗಿದ್ದಾರೆ. ಅವರ ಗೌರವಕ್ಕೆ ಧಕ್ಕೆಯಾಗುವುದನ್ನು ನಾವು ಸಹಿಸುವುದಿಲ್ಲ" ಎಂದಿದ್ದಾರೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ತುರ್ತು ಸಭೆಯಲ್ಲಿ ನಿಮ್ಮ ದೇಶ ಭಯೋತ್ಪಾದನೆಯನ್ನು ಬೆಂಬಲಿಸುತ್ತಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ವೇಳೆ ಪ್ರಧಾನಿ ಮೋದಿ ವಿರುದ್ಧ ವೈಯಕ್ತಿಕ ವಾಗ್ದಾಳಿ ನಡೆಸಿದ ಭುಟ್ಟೋ, ಭಾರತ ಎರಡೂ ದೇಶಗಳಲ್ಲಿನ ಮುಸ್ಲಿಮರನ್ನು ಭಯೋತ್ಪಾದಕರೊಂದಿಗೆ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದರು. ಅಲ್ಲದೆ "ಒಸಾಮಾ ಬಿನ್ ಲಾಡೆನ್ ಸತ್ತಿದ್ದಾನೆ. ಆದರೆ ಗುಜರಾತ್‌ನ ಕಟುಕ ಇನ್ನೂ ಬದುಕಿದ್ದಾನೆ ಮತ್ತು ಆತ ಭಾರತದ ಪ್ರಧಾನ ಮಂತ್ರಿ" ಎಂದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com