ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ಭಗವದ್ಗೀತೆ ಅಳವಡಿಸಲಾಗಿದೆ: ಕೇಂದ್ರ

6 ಮತ್ತು 7ನೇ ತರಗತಿಯ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ಶ್ರೀಮದ್ ಭಗವದ್ಗೀತೆಯ ಉಲ್ಲೇಖಗಳನ್ನು ಹಾಗೂ  11 ಮತ್ತು 12ನೇ ತರಗತಿಯ ಸಂಸ್ಕೃತ ಪಠ್ಯಪುಸ್ತಕಗಳು ಭಗವದ್ಗೀತೆಯ ಶ್ಲೋಕಗಳನ್ನು ಒಳಗೊಂಡಿವೆ ಎಂದು ಕೇಂದ್ರ ಸರ್ಕಾರ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: 6 ಮತ್ತು 7ನೇ ತರಗತಿಯ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ಶ್ರೀಮದ್ ಭಗವದ್ಗೀತೆಯ ಉಲ್ಲೇಖಗಳನ್ನು ಹಾಗೂ  11 ಮತ್ತು 12ನೇ ತರಗತಿಯ ಸಂಸ್ಕೃತ ಪಠ್ಯಪುಸ್ತಕಗಳು ಭಗವದ್ಗೀತೆಯ ಶ್ಲೋಕಗಳನ್ನು ಒಳಗೊಂಡಿವೆ ಎಂದು ಕೇಂದ್ರ ಸರ್ಕಾರ ಸೋಮವಾರ ಲೋಕಸಭೆಗೆ ತಿಳಿಸಿದೆ.

ಲೋಕಸಭೆಗೆ ಲಿಖಿತ ಉತ್ತರ ನೀಡಿದ ಶಿಕ್ಷಣ ಖಾತೆ ರಾಜ್ಯ ಸಚಿವೆ ಅನ್ನಪೂರ್ಣ ದೇವಿ, ಸಚಿವಾಲಯವು 2020 ರಲ್ಲಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯಲ್ಲಿ(ಎಐಸಿಟಿಇ) ಭಾರತೀಯ ಜ್ಞಾನ ವ್ಯವಸ್ಥೆ(ಐಕೆಎಸ್) ವಿಭಾಗವನ್ನು ಸ್ಥಾಪಿಸಿದ್ದು, ಶಿಸ್ತನ್ನು ಉತ್ತೇಜಿಸುವ ದೃಷ್ಟಿಕೊನ ಹೊಂದಿದೆ ಎಂದಿದ್ದಾರೆ.

ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್(ಎನ್‌ಸಿಇಆರ್‌ಟಿ) ರಾಷ್ಟ್ರೀಯ ಪಠ್ಯಕ್ರಮದ ಚೌಕಟ್ಟಿನ ಪುನರ್ ರಚನೆಯನ್ನು ಪ್ರಾರಂಭಿಸಿದೆ ಮತ್ತು ಈ ಸಂಬಂಧ ವಿವಿಧ ಸಚಿವಾಲಯಗಳು, ಇಲಾಖೆಗಳು, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ವಿವಿಧ ತಜ್ಞರ ಸಲಹೆಗಳನ್ನು ಕೇಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ(NEP) 2022 ಪ್ಯಾರಾ 4.27 ಭಾರತದ ಸಾಂಪ್ರದಾಯಿಕ ಜ್ಞಾನವನ್ನು ಉಲ್ಲೇಖಿಸುತ್ತದೆ ಎಂದು ಅನ್ನಪೂರ್ಣ ದೇವಿ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com