ಕೇಂದ್ರೀಯ ವಿದ್ಯಾಲಯಗಳಲ್ಲಿ 14,000ಕ್ಕೂ ಹೆಚ್ಚು ಶಿಕ್ಷಕರ ಹುದ್ದೆ ಖಾಲಿ ಇವೆ: ಕೇಂದ್ರ

ದೇಶಾದ್ಯಂತ ಕೇಂದ್ರೀಯ ವಿದ್ಯಾಲಯಗಳಲ್ಲಿ(ಕೆವಿ) 14,461 ಬೋಧಕ ಮತ್ತು ಬೋಧಕೇತರ ಹುದ್ದೆಗಳು ಖಾಲಿಯಿದ್ದು, ಆ ಪೈಕಿ ಮಧ್ಯಪ್ರದೇಶ ಮತ್ತು ತಮಿಳುನಾಡಿನಲ್ಲಿ ಹೆಚ್ಚು ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಸರ್ಕಾರ ಸೋಮವಾರ...
ಕೇಂದ್ರೀಯ ವಿದ್ಯಾಲಯ
ಕೇಂದ್ರೀಯ ವಿದ್ಯಾಲಯ

ನವದೆಹಲಿ: ದೇಶಾದ್ಯಂತ ಕೇಂದ್ರೀಯ ವಿದ್ಯಾಲಯಗಳಲ್ಲಿ(ಕೆವಿ) 14,461 ಬೋಧಕ ಮತ್ತು ಬೋಧಕೇತರ ಹುದ್ದೆಗಳು ಖಾಲಿಯಿದ್ದು, ಆ ಪೈಕಿ ಮಧ್ಯಪ್ರದೇಶ ಮತ್ತು ತಮಿಳುನಾಡಿನಲ್ಲಿ ಹೆಚ್ಚು ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಸರ್ಕಾರ ಸೋಮವಾರ ಲೋಕಸಭೆಗೆ ತಿಳಿಸಿದೆ.

ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವೆ ಅನ್ನಪೂರ್ಣ ದೇವಿ ಮಾತನಾಡಿ, ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ಕೆ.ವಿ.ಗಳು ಚಾಲನೆ ನೀಡಿದ್ದು, ಈ ಕುರಿತು ಇತ್ತೀಚೆಗೆ ಪ್ರಕಟಣೆ ಹೊರಡಿಸಲಾಗಿದೆ ಎಂದರು.

ನವೆಂಬರ್ 1 ರವರೆಗೆ, ಮಧ್ಯಪ್ರದೇಶದಲ್ಲಿ 1277 ಬೋಧಕ ಸಿಬ್ಬಂದಿ ಹುದ್ದೆಗಳು ಖಾಲಿ ಇದ್ದರೆ, ತಮಿಳುನಾಡಿನಲ್ಲಿ 1220 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಕರ್ನಾಟಕ (1053), ಪಶ್ಚಿಮ ಬಂಗಾಳ(1043), ಒಡಿಶಾ (963), ಮಹಾರಾಷ್ಟ್ರ (957), ಉತ್ತರ ಪ್ರದೇಶ (941) ಮತ್ತು ಕೇರಳ(802)ದಲ್ಲಿ ಖಾಲೆ ಹುದ್ದೆ ಭರ್ತಿ ಮಾಡಬೇಕಾದ ಇತರ ರಾಜ್ಯಗಳಾಗಿವೆ.

ಬೋಧನೆ-ಕಲಿಕೆ ಪ್ರಕ್ರಿಯೆಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಕೆವಿಎಸ್‌ನಿಂದ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com