ನೋಯ್ಡಾ: 15 ವರ್ಷದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿ, ಅತ್ಯಾಚಾರ ಎಸಗಿದ ಮೂವರು
ನೋಯ್ಡಾದ ಕಸ್ನಾ ಗ್ರಾಮದಲ್ಲಿ 15 ವರ್ಷದ ದಲಿತ ಬಾಲಕಿಯ ಮೇಲೆ ಓರ್ವ ಅಪ್ರಾಪ್ತ ಸೇರಿದಂತೆ ಮೂವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
Published: 20th December 2022 10:44 AM | Last Updated: 20th December 2022 10:44 AM | A+A A-

ಪ್ರಾತಿನಿಧಿಕ ಚಿತ್ರ
ನವದೆಹಲಿ: ನೋಯ್ಡಾದ ಕಸ್ನಾ ಗ್ರಾಮದಲ್ಲಿ 15 ವರ್ಷದ ದಲಿತ ಬಾಲಕಿಯ ಮೇಲೆ ಓರ್ವ ಅಪ್ರಾಪ್ತ ಸೇರಿದಂತೆ ಮೂವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಈ ಗ್ರಾಮವು ದೆಹಲಿಯಿಂದ 40 ಕಿಮೀ ದೂರದಲ್ಲಿದೆ. ಆರೋಪಿಗಳಾದ ಶೋಯೆಬ್ (22) ಮತ್ತು ವಸೀಮ್ (21) ಎಂದು ಗುರುತಿಸಲಾದ ಇಬ್ಬರನ್ನು ಬಂಧಿಸಲಾಗಿದ್ದು, ಮೂರನೇ ಆರೋಪಿ 15 ವರ್ಷದ ಬಾಲಕನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಅಧಿಕಾರಿಯ ಪ್ರಕಾರ, ಡಿಸೆಂಬರ್ 17 ರಂದು ಬಾಲಕಿಯ ಸೋದರಸಂಬಂಧಿ ದೂರು ನೀಡಿದ್ದು, ಮೂವರು ವ್ಯಕ್ತಿಗಳು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ದೂರಿದ್ದಾರೆ.
ಇದನ್ನೂ ಓದಿ: ಹಾಸನ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಮೂವರು ಕಾಮುಕರ ಬಂಧನ
ಆರೋಪಿಗಳಲ್ಲಿ ಒಬ್ಬಾತ ಸಂತ್ರಸ್ತೆಯ ಸ್ನೇಹಿತನಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿಯ ಆರೋಗ್ಯವನ್ನು ವಿಚಾರಿಸಲೆಂದು ಬಾಲಕಿ ಆತನು ವಾಸವಿದ್ದ ಬಾಡಿಗೆ ಮನೆಗೆ ಹೋಗಿದ್ದಾಳೆ. ಆಕೆ ಕೋಣೆಯೊಳಗೆ ಇದ್ದಾಗ, ಕೆಲವರು ಹೊರಗಿನಿಂದ ಬಾಗಿಲು ಹಾಕಿದ್ದಾರೆ. ಮೂವರು ಆರೋಪಿಗಳು ಅತ್ಯಾಚಾರ ಎಸಗಿದ್ದಾರೆಯೇ ಎಂಬುದು ಇನ್ನೂ ಖಚಿತವಾಗಿಲ್ಲ. ಸಂತ್ರಸ್ತೆಯ ವೈದ್ಯಕೀಯ ವರದಿಗಾಗಿ ಕಾಯಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಆರೋಪಿಗಳು ತನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.