ಸಂಸತ್ತಿನಲ್ಲಿ 'ನಾಯಿ' ವಿವಾದ ನಡುವೆ ಖರ್ಗೆ ಮತ್ತಿತರರೊಂದಿಗೆ ಸಿರಿಧಾನ್ಯ ಖಾದ್ಯ ಸವಿದ ಪ್ರಧಾನಿ ಮೋದಿ!

2023 ಸಿರಿ ಧಾನ್ಯ ವರ್ಷದ ಅಂಗವಾಗಿ ಕೇಂದ್ರ ಕೃಷಿ ಸಚಿವ ನರೇಂದ್ರ  ತೋಮರ್ ಮಂಗಳವಾರ ಆಯೋಜಿಸಿದ್ದ ಭೋಜನಕೂಟದಲ್ಲಿ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಮತ್ತಿತರರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಿರಿಧಾನ್ಯಗಳಿಂದ ಮಾಡಿದ ಆಹಾರವನ್ನು ಸವಿದರು.
ಭೋಜನಕೂಟದಲ್ಲಿ ಪ್ರಧಾನಿ ಮೋದಿ, ಮಲ್ಲಿಕಾರ್ಜುನ ಖರ್ಗೆ ಮತ್ತಿತರರು
ಭೋಜನಕೂಟದಲ್ಲಿ ಪ್ರಧಾನಿ ಮೋದಿ, ಮಲ್ಲಿಕಾರ್ಜುನ ಖರ್ಗೆ ಮತ್ತಿತರರು

ನವದೆಹಲಿ: 2023 ಸಿರಿ ಧಾನ್ಯ ವರ್ಷದ ಅಂಗವಾಗಿ ಕೇಂದ್ರ ಕೃಷಿ ಸಚಿವ ನರೇಂದ್ರ  ತೋಮರ್ ಮಂಗಳವಾರ ಆಯೋಜಿಸಿದ್ದ ಭೋಜನಕೂಟದಲ್ಲಿ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಮತ್ತಿತರರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಿರಿಧಾನ್ಯಗಳಿಂದ ಮಾಡಿದ ಆಹಾರವನ್ನು ಸವಿದರು.

ಮೋದಿ ಸುಮಾರು 40 ನಿಮಿಷಗಳ ಕಾಲ ಭೋಜನ ಕೂಟದಲ್ಲಿ ಪಾಲ್ಗೊಂಡರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭೆ ಸಭಾಪತಿ ಜಗದೀಪ್ ಧಂಕರ್ ಮತ್ತಿತರ ಸಂಸದರು ವಿಶೇಷವಾಗಿ ರಾಗಿ, ಸಜ್ಜೆ ಮತ್ತಿತರ ಸಿರಿಧಾನ್ಯಗಳಿಂದ ತಯಾರಿಸಲಾದ ವಿವಿಧ ಖಾದ್ಯಗಳ ರುಚಿಯನ್ನು ಆನಂದಿಸಿದರು.

ಈ ಕುರಿತ ಫೋಟೋಗಳನ್ನು  ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, 2023 ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವೆಂದು  ಗುರುತಿಸಲು ತಯಾರಿ ನಡೆಸುತ್ತಿರುವಾಗ, ಸಂಸತ್ತಿನಲ್ಲಿ ಸಿರಿಧಾನ್ಯಗಳಿಂದ ಮಾಡಿದ ಭೋಜನಕೂಟದಲ್ಲಿ ಭಾಗವಹಿಸಿದ್ದೇವೆ. ಪಕ್ಷಾತೀತವಾಗಿ ಇಂತಹ ಕೂಟದಲ್ಲಿ ಭಾಗವಹಿಸಿದ್ದಕ್ಕೆ ತುಂಬಾ  ಸಂತೋಷವಾಗಿದೆ ಎಂದು ಹೇಳಿದ್ದಾರೆ. 

ರಾಜಸ್ಥಾನದ ಅಲ್ವಾರ್ ನಲ್ಲಿ ಖರ್ಗೆ ಮಾಡಿದ ಟೀಕೆಗಳ ಹಿನ್ನೆಲೆಯಲ್ಲಿ ರಾಜ್ಯಸಭೆಯಲ್ಲಿ ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರು ಪರಸ್ಪರ ಕಿಡಿಕಾರಿದ ನಂತರ ನಡೆದ ಭೋಜನಕೂಟ ತೀವ್ರ ಕುತೂಹಲ ಮೂಡಿಸಿತು.

ಕಾಂಗ್ರೆಸ್ ದೇಶಕ್ಕಾಗಿ ಕೆಲಸ ಮಾಡಿದೆ. ಸ್ವಾತಂತ್ರ್ಯ ಪಡೆಯಲು ಸಹಾಯ ಮಾಡಿದೆ. ನಮ್ಮ ನಾಯಕರು ಪ್ರಾಣ ತ್ಯಾಗ ಮಾಡಿದ್ದಾರೆ. ಆದರೆ ಬಿಜೆಪಿ ನಾಯಕರು ದೇಶಕ್ಕಾಗಿ ಒಂದು "ನಾಯಿಯನ್ನು ಸಹ ಕಳೆದುಕೊಂಡಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಂಸತ್ತಿನಲ್ಲಿ ಮಂಗಳವಾರ ತೀವ್ರ ಗದ್ದಲವನ್ನು ಸೃಷ್ಟಿಸಿತು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com