ಸಂಸತ್ ಮುಂಗಾರು ಅಧಿವೇಶನ: ಒಂದು ವಾರ ಮುಂಚಿತವಾಗಿ ಮುಗಿಯುವ ಸಾಧ್ಯತೆ

ಈ ಬಾರಿಯ ಸಂಸತ್ ಮುಂಗಾರು ಅಧಿವೇಶನ ಒಂದು ವಾರ ಮುಂಚಿತವಾಗಿ ಡಿಸೆಂಬರ್ 23ಕ್ಕೆ ಮುಕ್ತಾಯವಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ಮಂಗಳವಾರ ತಿಳಿಸಿವೆ.
ಸಂಸತ್ ಸಾಂದರ್ಭಿಕ ಚಿತ್ರ
ಸಂಸತ್ ಸಾಂದರ್ಭಿಕ ಚಿತ್ರ

ನವದೆಹಲಿ: ಈ ಬಾರಿಯ ಸಂಸತ್ ಮುಂಗಾರು ಅಧಿವೇಶನ ಒಂದು ವಾರ ಮುಂಚಿತವಾಗಿ ಡಿಸೆಂಬರ್ 23ಕ್ಕೆ ಮುಕ್ತಾಯವಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ಮಂಗಳವಾರ ತಿಳಿಸಿವೆ.

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಅಧ್ಯಕ್ಷತೆಯಲ್ಲಿ ನಡೆದ ಲೋಕಸಭಾ ಕಾರ್ಯ ಕಲಾಪ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಡಿಸೆಂಬರ್ 7 ರಿಂದ ಆರಂಭವಾಗಿರುವ ಸಂಸತ್ ಅಧಿವೇಶನ, ಡಿಸೆಂಬರ್ 29 ರಂದು ಮುಗಿಯಬೇಕಿತ್ತು. ಆದರೆ, ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಆದಷ್ಟು ಬೇಗ ಸಂಸತ್ ಅಧಿವೇಶನ ಮುಗಿಸಬೇಕೆಂದು ಅನೇಕ ಪ್ರತಿಪಕ್ಷಗಳ ನಾಯಕರು ಸರ್ಕಾರ ಮತ್ತು ಸ್ಪೀಕರ್ ಅವರನ್ನು ಒತ್ತಾಯಿಸಿದ್ದರು.

ಈ ಹಿನ್ನೆಲೆಯಲ್ಲಿ ಒಂದು ವಾರ ಮುಂಚಿತವಾಗಿ ಡಿಸೆಂಬರ್ 23 ರಂದು ಸಂಸತ್ ಮುಂಗಾರು ಅಧಿವೇಶನ ಕೊನೆಯಾಗಲಿದೆ ಎಂದು ಮೂಲಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com