ಮಣಿಪುರದ ನೋನಿಯಲ್ಲಿ ಶಾಲಾ ಬಸ್ ಪಲ್ಟಿ; ಐವರು ವಿದ್ಯಾರ್ಥಿಗಳು ಸಾವು, 20ಕ್ಕೂ ಅಧಿಕ ಮಂದಿಗೆ ಗಾಯ

ಮಣಿಪುರದ ನೋನಿ ಜಿಲ್ಲೆಯಲ್ಲಿ ಬುಧವಾರ ಶಾಲಾ ಬಸ್ ಪಲ್ಟಿಯಾದ ಪರಿಣಾಮ ಐವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಮತ್ತು 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಣಿಪುರದ ನೋನಿಯಲ್ಲಿ ಪಲ್ಟಿಯಾದ ಶಾಲಾ ಬಸ್
ಮಣಿಪುರದ ನೋನಿಯಲ್ಲಿ ಪಲ್ಟಿಯಾದ ಶಾಲಾ ಬಸ್

ಇಂಫಾಲ: ಮಣಿಪುರದ ನೋನಿ ಜಿಲ್ಲೆಯಲ್ಲಿ ಬುಧವಾರ ಶಾಲಾ ಬಸ್ ಪಲ್ಟಿಯಾದ ಪರಿಣಾಮ ಐವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಮತ್ತು 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯ ರಾಜಧಾನಿ ಇಂಫಾಲದಿಂದ ಸುಮಾರು 55 ಕಿಮೀ ದೂರದಲ್ಲಿರುವ ಬೆಟ್ಟದ ಜಿಲ್ಲೆಯ ಲಾಂಗ್‌ಸೈ ಪ್ರದೇಶದ ಬಳಿಯ ಓಲ್ಡ್ ಕ್ಯಾಚಾರ್ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.

ತಂಬಲ್ನು ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಎರಡು ಬಸ್‌ಗಳಲ್ಲಿ ನೋನಿ ಜಿಲ್ಲೆಯ ಖೌಪುಮ್‌ಗೆ ವಾರ್ಷಿಕ ಶಾಲಾ ಅಧ್ಯಯನ ಪ್ರವಾಸಕ್ಕೆ ತೆರಳಿದರು. ವಿದ್ಯಾರ್ಥಿನಿಯರು ಪ್ರಯಾಣಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'ಇಂದು ಹಳೇ ಕ್ಯಾಚಾರ್ ರಸ್ತೆಯಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ ಅಪಘಾತದ ಸುದ್ದಿ ಕೇಳಿ ಅತೀವ ದುಃಖವಾಯಿತು. ರಕ್ಷಣಾ ಕಾರ್ಯಾಚರಣೆಗಾಗಿ ಎಸ್‌ಡಿಆರ್‌ಎಫ್, ವೈದ್ಯಕೀಯ ತಂಡ ಮತ್ತು ಶಾಸಕರು ಸ್ಥಳಕ್ಕೆ ತೆರಳಿದ್ದಾರೆ. ಬಸ್‌ನಲ್ಲಿರುವ ಪ್ರತಿಯೊಬ್ಬರ ಸುರುಕ್ಷತೆಗಾಗಿ ಪ್ರಾರ್ಥಿಸುತ್ತೇನೆ' ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಟ್ವೀಟ್ ಮಾಡಿ, ಪಲ್ಟಿಯಾದ ಬಸ್‌ನ ವಿಡಿಯೋ ಕ್ಲಿಪ್ ಅನ್ನು ಹಂಚಿಕೊಂಡಿದ್ದಾರೆ.

ಗಾಯಗೊಂಡ ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ರಾಜ್ಯ ರಾಜಧಾನಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com