ಗುಜರಾತ್ ನಲ್ಲಿ ಪ್ರಧಾನಿ ಮೋದಿ ಕೋವಿಡ್ ನಿಯಮ ಪಾಲಿಸಿದ್ದರೇ: ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ

ಭಾರತ್ ಜೋಡೋ ಯಾತ್ರೆಗೆ ಜನರಿಂದ ವ್ಯಕ್ತವಾಗುತ್ತಿರುವ ಪ್ರತಿಕ್ರಿಯೆ ಬಿಜೆಪಿಯಲ್ಲಿ ಆತಂಕ ಸೃಷ್ಟಿಸಿದ್ದು, ಹೀಗಾಗಿಯೇ ಕೋವಿಡ್ ನೆಪ ನೀಡಿ ಯಾತ್ರೆಗೆ ಅಡ್ಡಿಯುಂಟು ಮಾಡಲು ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಭಾರತ್ ಜೋಡೋ ಯಾತ್ರೆಗೆ ಜನರಿಂದ ವ್ಯಕ್ತವಾಗುತ್ತಿರುವ ಪ್ರತಿಕ್ರಿಯೆ ಬಿಜೆಪಿಯಲ್ಲಿ ಆತಂಕ ಸೃಷ್ಟಿಸಿದ್ದು, ಹೀಗಾಗಿಯೇ ಕೋವಿಡ್ ನೆಪ ನೀಡಿ ಯಾತ್ರೆಗೆ ಅಡ್ಡಿಯುಂಟು ಮಾಡಲು ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ.

ಭಾರತ್ ಜೋಡೋ ಯಾತ್ರೆ ವೇಳೆ ಕೋವಿಡ್ ನಿಯಮಾವಳಿಗಳನ್ನು ಪಾಲನೆ ಮಾಡಿ, ಇಲ್ಲಿದಿದ್ದರೆ, ಯಾತ್ರೆಯನ್ನು ನಿಲ್ಲಿಸುವಂತೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರು ರಾಹುಲ್ ಗಾಂಧಯವರಿಗೆ ಪತ್ರ ಬರೆದಿದ್ದಾರೆ.

ಈ ಪತ್ರ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು, ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಗೆ ಜನರಿಂದ ಭಾರೀ ಪ್ರತಿಕ್ರಿಯೆ ಸಿಗುತ್ತಿದೆ. ಬಿಜೆಪಿಗೆ ಇದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಯಾತ್ರೆಗೆ ಅಡ್ಡಿಪಡಿಸಲು ಈ ರೀತಿ ಮಾಡಲಾಗುತ್ತಿದೆ. ಗುಜರಾತ್ ಚುನಾವಣೆ ವೇಳೆ, ಪ್ರಧಾನಿ ಮೋದಿ ಅವರು ವೋಟ್ ಕೇಳಲು ಮನೆ ಮನೆ ಹೋಗಿದ್ದಾಗ ಮಾಸ್ಕ್ ಧರಿಸಿದ್ದರೇ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ನಾಯಕ ಪವನ್ ಖೇರಾ ಮಾತನಾಡಿ, ಕೋವಿಡ್ ಮಾರ್ಗಸೂಚಿನಗಳನ್ನು ಬಿಡುಗಡೆ ಮಾಡಿ. ಅದನ್ನು ಪಕ್ಷವು ಅನುಸರಿಸುತ್ತದೆ ಎಂದಿದ್ದಾರೆ.

ರಾಜಸ್ಥಾನದಲ್ಲಿ ಬಿಜೆಪಿ ಅಧ್ಯಕ್ಷ ಸತೀಶ್ ಪೂನಿಯಾ ಅವರು ಜನಾಕ್ರೋಶ ಯಾತ್ರೆ ನಡೆಸುತ್ತಿದ್ದಾರೆ. ಅವರಿಗೇಕೆ ಪತ್ರವನ್ನು ಕಳುಹಿಸಲಿಲ್ಲ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆಗೆ ಅಷ್ಟೊಂದು ಜನರ ಪ್ರತಿಕ್ರಿಯೆಯಿಲ್ಲ. ಹೀಗಾಗಿ ನಮಗೆ ಪತ್ರ ರವಾನಿಸಿ ಯಾತ್ರೆ ಮೊಟಕುಗೊಳಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿಯೂ ಬಿಜೆಪಿ ಮತ್ತೊಂದು ಯಾತ್ರೆಯನ್ನು ಆಯೋಜಿಸುತ್ತಿದೆ. ಆರೋಗ್ಯ ಸಚಿವರು ಈ ಪತ್ರವನ್ನು ಕರ್ನಾಟಕದ ಬಿಜೆಪಿಗೆ ರವಾನಿಸಿದ್ದಾರೆಯೇ. ಇಂದೂ ಯಾರಾದರೂ ವಿಮಾನದಲ್ಲಿ ಪ್ರಯಾಣಿಸಿದರೂ, ಯಾರೂ ನಿಮ್ಮನ್ನು ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸುವಂತೆ ಕೇಳುತ್ತಿಲ್ಲ. ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲೇಕೆ ಕೇಂದ್ರ ಸರ್ಕಾರ ಕಠಿಣ ಕ್ರಮಗಳನ್ನು ಜಾರಿಗೆ ತಂದಿಲ್ಲ ಎಂದು ಪ್ರಶ್ನಿಸಿದ್ದಾರೆ.

ಕೇವಲ ರಾಹುಲ್ ಗಾಂಧಿ ಏಕೆ, ಕೇವಲ ಕಾಂಗ್ರೆಸ್ ಏಕೆ, ಕೇವಲ ಭಾರತ್ ಜೋಡೋ ಯಾತ್ರೆ ಏಕೆ? ಸಂಸತ್ತು ಅಧಿವೇಶನವನ್ನು ಮುಂದೂಡಿದ್ದಾರೆಯೇ? ಅಧಿವೇಶನ ಇನ್ನೂ ನಡೆಯುತ್ತಿದೆಯೇ? ಭೌತಿಕ ಹಾಜರಾತಿಯೊಂದಿಗೆ ಸಂಸತ್ತು ಅಧಿವೇಶನ ನಡೆಸಬಹುದಾದರೆ, ಜನಾಕ್ರೋಶ ಯಾತ್ರೆ ನಡೆಸಬಹುದಾದರೆ, ಕರ್ನಾಟಕದಲ್ಲಿ ಬಿಜೆಪಿ ಯಾತ್ರೆ ನಡೆಸುತ್ತಿರುವುದಾದರೆ, ವಿಮಾನ ನಿಲ್ದಾಣದಲ್ಲಿ ಮಾಸ್ಕ್ ಕಡ್ಡಾಯವಿಲ್ಲದಿದ್ದರೆ, ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಗೇಕೆ ತಡೆಯೊಡ್ಡುತ್ತಿದ್ದಾರೆಂದು ಪ್ರಶ್ನಿಸಿದ್ದಾರೆ. ದಯವಿಟ್ಟು ಕೋವಿಡ್ ಮಾರ್ಗಸೂಚಿನಗಳನ್ನು ಘೋಷಿಸಿ, ನಾವೆಲ್ಲರೂ ಆ ನಿಯಮವನ್ನು ಅನುಸರಿಸುತ್ತೇವೆಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com