ಡಿಎಂಕೆ ಸಂಸದ ಎ ರಾಜಾಗೆ ಸೇರಿದ 55 ಕೋಟಿ ರೂ. ಮೌಲ್ಯದ ಬೇನಾಮಿ ಆಸ್ತಿ ಜಪ್ತಿ ಮಾಡಿದ ಇಡಿ

ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ಡಿಎಂಕೆ ಸಂಸದ ಎ ರಾಜಾ ಅವರಿಗೆ ಸೇರಿದ 55 ಕೋಟಿ ರೂಪಾಯಿ ಮೌಲ್ಯದ ಬೇನಾಮಿ ಆಸ್ತಿಯನ್ನು ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಜಪ್ತಿ ಮಾಡಿರುವುದಾಗಿ ಜಾರಿ...
ಎ ರಾಜಾ
ಎ ರಾಜಾ

ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ಡಿಎಂಕೆ ಸಂಸದ ಎ ರಾಜಾ ಅವರಿಗೆ ಸೇರಿದ 55 ಕೋಟಿ ರೂಪಾಯಿ ಮೌಲ್ಯದ ಬೇನಾಮಿ ಆಸ್ತಿಯನ್ನು ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಜಪ್ತಿ ಮಾಡಿರುವುದಾಗಿ ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ತಿಳಿಸಿದೆ.

2004ರಿಂದ 2007 ರ ವರೆಗೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವರಾಗಿದ್ದ ಅವಧಿಯಲ್ಲಿ ಗುರುಗ್ರಾಮ್ ಮೂಲದ ರಿಯಲ್ ಎಸ್ಟೇಟ್ ಕಂಪನಿಗೆ ಪರಿಸರ ಅನುಮತಿ ನೀಡಲು ರಾಜಾ ಅವರೊಂದಿಗೆ ಸಂಬಂಧ ಹೊಂದಿರುವ ಕಂಪನಿ ಈ ಭೂಮಿ ಖರೀದಿಸಿದೆ ಎಂದು ಕೇಂದ್ರ ತನಿಖಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಭೂಮಿ ರಾಜಾ ಅವರ ಬೇನಾಮಿ ಕಂಪನಿ ಹೆಸರಿನಲ್ಲಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ. 

59 ವರ್ಷದ ರಾಜಾ ಪ್ರಸ್ತುತ ನೀಲಗಿರಿ ಲೋಕಸಭಾ ಕ್ಷೇತ್ರದಿಂದ ಡಿಎಂಕೆ ಸಂಸದರಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com