ಭಾರತ್ ಜೋಡೋ ಯಾತ್ರೆ ನಿಲ್ಲಿಸಲು ಸರ್ಕಾರಕ್ಕೆ ಕೋವಿಡ್ ಒಂದು ನೆಪ: ರಾಹುಲ್ ಗಾಂಧಿ

ಭಾರತ್ ಜೋಡೋ ಯಾತ್ರೆಯನ್ನು ನಿಲ್ಲಿಸಲು ಕೇಂದ್ರ ಸರ್ಕಾರಕ್ಕೆ ಕೋವಿಡ್ ಒದು "ನೆಪ" ಅಷ್ಟೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಹೇಳಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನುಹ್‌(ಹರಿಯಾಣ): ಭಾರತ್ ಜೋಡೋ ಯಾತ್ರೆಯನ್ನು ನಿಲ್ಲಿಸಲು ಕೇಂದ್ರ ಸರ್ಕಾರಕ್ಕೆ ಕೋವಿಡ್ ಒದು "ನೆಪ" ಅಷ್ಟೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಹೇಳಿದ್ದಾರೆ.

ಕೋವಿಡ್ ಪ್ರೋಟೋಕಾಲ್‌ ಅನುಸರಿಸಲು ಸಾಧ್ಯವಾಗದಿದ್ದರೆ ಯಾತ್ರೆಯನ್ನು ಸ್ಥಗಿತಗೊಳಿಸುವಂತೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ತಮಗೆ ಪತ್ರ ಬರೆದ ಕೆಲವು ದಿನಗಳ ನಂತರ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, "ಈ ಯಾತ್ರೆಯು ಕಾಶ್ಮೀರಕ್ಕೆ ಹೋಗುತ್ತದೆ. ಈಗ ಅವರು ಹೊಸ ಆಲೋಚನೆಯೊಂದಿಗೆ ಬಂದಿದ್ದಾರೆ. ಅವರು ಕೋವಿಡ್ ಹರಡುತ್ತಿದೆ ಎಂದು ನನಗೆ ಪತ್ರ ಬರೆದಿದ್ದಾರೆ. ಯಾತ್ರೆಯನ್ನು ನಿಲ್ಲಿಸಿ" ಎಂದು ಹೇಳಿದ್ದಾರೆ. ಯಾತ್ರೆಯನ್ನು ತಡೆಯಲು ನೆಪಗಳನ್ನು ಹುಡುಕಲಾಗುತ್ತಿದೆ ಎಂದಿದ್ದಾರೆ.

ಹರಿಯಾಣದ ನುಹ್ ಜಿಲ್ಲೆಯ ಘಸೆರಾ ಗ್ರಾಮದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ ಕೋವಿಡ್ ಹರಡುತ್ತಿದೆ, ಮಾಸ್ಕ್ ಧರಿಸಿ ಎಂದು ಹೇಳುತ್ತಿದೆ. ಇದೆಲ್ಲವೂ ಯಾತ್ರೆ ನಿಲ್ಲಿಸಲು ನೆಪಗಳಷ್ಟೇ. ಅವರು ಈ ದೇಶದ ಶಕ್ತಿ ಮತ್ತು ಸತ್ಯ ಕಂಡು ಬೆದರಿದ್ದಾರೆ" ಎಂದು ವಾಗ್ದಾಳಿ ನಡೆಸಿದರು.

ಸೆ.7ರಂದು ಕನ್ಯಾಕುಮಾರಿಯಲ್ಲಿ ಆರಂಭವಾದ ಭಾರತ್ ಜೋಡೋ ಯಾತ್ರೆಯು ತಮಿಳು54ನಾಡು, ಕೇರಳ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ರಾಜಸ್ಥಾನದ ನಂತರ ಈಗ ಹರಿಯಾಣ ಪ್ರವೇಶಿಸಿದೆ.

ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸಲು ಸಾಧ್ಯವಾಗದಿದ್ದರೆ ಯಾತ್ರೆಯನ್ನು ಸ್ಥಗಿತಗೊಳಿಸುವ ಬಗ್ಗೆ ಪರಿಗಣಿಸುವಂತೆ ಕೇಂದ್ರ ಆರೋಗ್ಯ ಸಚಿವ ಮಾಂಡವಿಯಾ ಅವರು ಮಂಗಳವಾರ ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ ಅವರಿಗೆ ಪತ್ರ ಬರೆದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com