ಆಹಾರ ಭದ್ರತಾ ಕಾಯ್ದೆ ಅಡಿ ಕೇಂದ್ರದಿಂದ ಬಡವರಿಗೆ ಒಂದು ವರ್ಷ ಉಚಿತ ಪಡಿತರ

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ(ಎನ್‌ಎಫ್‌ಎಸ್‌ಎ) ಅಡಿಯಲ್ಲಿ ದೇಶದ 81.35 ಕೋಟಿ ಬಡವರಿಗೆ ಒಂದು ವರ್ಷದವರೆಗೆ ಉಚಿತ ಪಡಿತರ ನೀಡಲು ಕೇಂದ್ರ ಸರ್ಕಾರ ಶುಕ್ರವಾರ ನಿರ್ಧರಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ(ಎನ್‌ಎಫ್‌ಎಸ್‌ಎ) ಅಡಿಯಲ್ಲಿ ದೇಶದ 81.35 ಕೋಟಿ ಬಡವರಿಗೆ ಒಂದು ವರ್ಷದವರೆಗೆ ಉಚಿತ ಪಡಿತರ ನೀಡಲು ಕೇಂದ್ರ ಸರ್ಕಾರ ಶುಕ್ರವಾರ ನಿರ್ಧರಿಸಿದೆ.

ಆಹಾರ ಭದ್ರತಾ ಕಾಯ್ದೆ ಅಡಿಯಲ್ಲಿ ಕೇಂದ್ರ ಸರ್ಕಾರ ಪ್ರಸ್ತುತ ಪ್ರತಿ ವ್ಯಕ್ತಿಗೆ ಐದು ಕೆಜಿ ಆಹಾರ ಧಾನ್ಯಗಳನ್ನು ಪ್ರತಿ ಕೆಜಿಗೆ 2-3 ರೂ.ಗೆ ಒದಗಿಸುತ್ತಿದೆ.

ಅಂತ್ಯೋದಯ ಅನ್ನ ಯೋಜನೆ(ಎಎವೈ) ಅಡಿಯಲ್ಲಿ ಬರುವ ಕುಟುಂಬಗಳು ತಿಂಗಳಿಗೆ 35 ಕೆಜಿ ಆಹಾರ ಧಾನ್ಯಗಳನ್ನು ಪಡೆಯುತ್ತವೆ. ಎನ್‌ಎಫ್‌ಎಸ್‌ಎ ಅಡಿಯಲ್ಲಿ ಬಡವರಿಗೆ ಕೆಜಿಗೆ 3 ರೂ.ಗೆ ಅಕ್ಕಿ ಮತ್ತು ಗೋಧಿಯನ್ನು ಕೆಜಿಗೆ 2 ರೂ.ಗೆ ನೀಡಲಾಗುತ್ತದೆ.

ಕೇಂದ್ರ ಸಂಪುಟದ ನಿರ್ಧಾರದ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಆಹಾರ ಸಚಿವ ಪಿಯೂಷ್ ಗೋಯಲ್, ಎನ್‌ಎಫ್‌ಎಸ್‌ಎ ಅಡಿಯಲ್ಲಿ ಉಚಿತ ಆಹಾರ ಧಾನ್ಯಗಳನ್ನು ಒದಗಿಸುವ ಸಂಪೂರ್ಣ ಹೊರೆಯನ್ನು ಕೇಂದ್ರ ಸರ್ಕಾರ ಹೊರಲಿದೆ ಎಂದು ಹೇಳಿದರು.

ಇದರಿಂದ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ 2 ಲಕ್ಷ ಕೋಟಿ ರೂ. ಹೆಚ್ಚುವರಿ ಹೊರೆಯಾಗಲಿದೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.

ಏತನ್ಮಧ್ಯೆ, ಡಿಸೆಂಬರ್ 31 ರಂದು ಕೊನೆಗೊಳ್ಳುವ ಉಚಿತ ಪಡಿತರ ಯೋಜನೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ(ಪಿಎಂಜಿಕೆಎವೈ)ಯನ್ನು ವಿಸ್ತರಿಸದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com