ವಿಡಿಯೋಕಾನ್ ಪ್ರಕರಣ: ಐಸಿಐಸಿಐ ಮಾಜಿ ಸಿಇಒ ಚಂದಾ ಕೊಚ್ಚರ್, ಪತಿ ಬಂಧನ

2012ರಲ್ಲಿ ಐಸಿಐಸಿಐ ಬ್ಯಾಂಕ್‌ನಿಂದ ಮಂಜೂರಾದ ಸಾಲದಲ್ಲಿ ವಂಚನೆ ಮತ್ತು ಅಕ್ರಮಗಳಿಗೆ ಸಂಬಂಧಿಸಿದಂತೆ ಐಸಿಐಸಿಐ ಬ್ಯಾಂಕ್‌ ಮಾಜಿ ಸಿಇಒ ಮತ್ತು ಎಂಡಿ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚರ್ ಅವರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಚಂದಾ ಕೊಚ್ಚರ್
ಚಂದಾ ಕೊಚ್ಚರ್

ನವದೆಹಲಿ: 2012ರಲ್ಲಿ ಐಸಿಐಸಿಐ ಬ್ಯಾಂಕ್‌ನಿಂದ ಮಂಜೂರಾದ ಸಾಲದಲ್ಲಿ ವಂಚನೆ ಮತ್ತು ಅಕ್ರಮಗಳಿಗೆ ಸಂಬಂಧಿಸಿದಂತೆ ಐಸಿಐಸಿಐ ಬ್ಯಾಂಕ್‌ ಮಾಜಿ ಸಿಇಒ ಮತ್ತು ಎಂಡಿ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚರ್ ಅವರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಗೆ ಸಂಬಂಧಿಸಿದ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಚಂದಾ ಕೊಚ್ಚರ್, ಅವರ ಪತಿ ಮತ್ತು ವಿಡಿಯೋಕಾನ್ ಗ್ರೂಪ್‌ನ ವೇಣುಗೋಪಾಲ್ ಧೂತ್, ನ್ಯೂಪವರ್ ರಿನ್ಯೂವಬಲ್ಸ್, ಸುಪ್ರೀಂ ಎನರ್ಜಿ, ವಿಡಿಯೋಕಾನ್ ಇಂಟರ್‌ನ್ಯಾಶನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ವಿಡಿಯೋಕಾನ್ ಇಂಡಸ್ಟ್ರೀಸ್ ಲಿಮಿಟೆಡ್ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ.

2012 ರಲ್ಲಿ ಐಸಿಐಸಿಐ ಬ್ಯಾಂಕ್‌ನಿಂದ ವಿಡಿಯೋಕಾನ್ ಗ್ರೂಪ್ 3,250 ಕೋಟಿ ರೂಪಾಯಿ ಸಾಲ ಪಡೆದು, ಕೆಲ ತಿಂಗಳ ನಂತರ ವಿಡಿಯೋಕಾನ್ ಪ್ರವರ್ತಕ ವೇಣುಗೋಪಾಲ್ ಧೂತ್ ಅವರು ನ್ಯೂಪವರ್‌ನಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಆರೋಪಿಗಳು ಐಸಿಐಸಿಐ ಬ್ಯಾಂಕ್‌ಗೆ ವಂಚಿಸಲು ಇತರರೊಂದಿಗೆ ಕ್ರಿಮಿನಲ್ ಸಂಚು ರೂಪಿಸಿ ಖಾಸಗಿ ಕಂಪನಿಗಳಿಗೆ ಸಾಲ ಮಂಜೂರು ಮಾಡಿದ್ದಾರೆ ಎಂದು ಸಿಬಿಐ ಆರೋಪಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com