ಕೇರಳದ ಪತ್ರಕರ್ತ ಸಿದ್ದಿಕ್ ಕಪ್ಪನ್‌ಗೆ ಜಾಮೀನು; ಎರಡು ವರ್ಷಗಳ ನಂತರ ಜೈಲಿನಿಂದ ಬಿಡುಗಡೆ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಕೇರಳದ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರಿಗೆ ಅಲಹಾಬಾದ್ ಹೈಕೋರ್ಟ್‌ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
ಪತ್ರಕರ್ತ ಸಿದ್ದಿಕ್ ಕಪ್ಪನ್
ಪತ್ರಕರ್ತ ಸಿದ್ದಿಕ್ ಕಪ್ಪನ್

ಅಲಹಾಬಾದ್: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಕೇರಳದ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರಿಗೆ ಅಲಹಾಬಾದ್ ಹೈಕೋರ್ಟ್‌ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ಕಪ್ಪನ್, ಮಲಯಾಳಂ ಸುದ್ದಿ ಪೋರ್ಟಲ್ ಅಝಿಮುಖಂ ವರದಿಗಾರ ಮತ್ತು ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್(ಕೆಯುಡಬ್ಲ್ಯುಜೆ)ನ ದೆಹಲಿ ಘಟಕದ ಕಾರ್ಯದರ್ಶಿಯಾಗಿದ್ದು, ಈ ಹಿಂದೆ ಕಾನೂನುಬಾಹಿರ ಚಟುವಟಿಕೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದರೂ ಜೈಲಿನಿಂದ ಬಿಡುಗಡೆಯಾಗಿರಲಿಲ್ಲ. ಈಗ ಎರಡೂ ಪ್ರಕರಣಗಳಲ್ಲಿ ಜಾಮೀನು ಸಿಕ್ಕಿದ್ದು, ಎರಡು ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗುತ್ತಿದ್ದಾರೆ.

2020ರ ಅಕ್ಟೋಬರ್‌ನಲ್ಲಿ ದಲಿತ ಮಹಿಳೆಯ ಅತ್ಯಾಚಾರ ಮತ್ತು ಹತ್ಯೆಯ ವರದಿ ಮಾಡಲು ಉತ್ತರ ಪ್ರದೇಶದ ಹತ್ರಾಸ್‌ಗೆ ತೆರಳುತ್ತಿದ್ದಾಗ ಕೇರಳ ಮೂಲದ ಈ ಪತ್ರಕರ್ತನನ್ನು ಬಂಧಿಸಲಾಗಿತ್ತು.

ಇಡಿ ಪ್ರಕರಣದಲ್ಲಿ ಲಖನೌ ನ್ಯಾಯಾಲಯ ಜಾಮೀನು  ನಿರಾಕರಿಸಿದ ನಂತರ ಕಪ್ಪನ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ  ದಿನೇಶ್ ಕುಮಾರ್ ಸಿಂಗ್ ಅವರ ಏಕ ಸದಸ್ಯ ಪೀಠ ಆರೋಪಿಗೆ ಜಾಮೀನು ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com